ತುಮಕೂರು: ಇಬ್ಬರು ಮಕ್ಕಳೊಂದಿಗೆ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಮೃತಪಟ್ಟ ಮಹಿಳೆಯನ್ನು ಸರಿತಾ ಎಂದು ಗುರುತಿಸಲಾಗಿದೆ. ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕಡಪಲಕೆರೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಇನ್ನಿಬ್ಬರು ಮಕ್ಕಳ ಜೊತೆಗೆ ಸರಿತಾ ಮಧ್ಯಾಹ್ನ 2 ಗಂಟೆಯ ಸುಮಾರಿಗೆ ಆತ್ಮಹತ್ಯೆಗೆ ಶರಣಾಗಿದ್ದರು.
ಕಡಪಲಕೆರೆ ಗ್ರಾಮದ ಸರಿತಾ ಅವರು 6 ವರ್ಷಗಳ ಹಿಂದೆ ಅದೇ ಗ್ರಾಮದ ಸಂತೋಷ ಎಂಬಾತನನ್ನು ವಿವಾಹವಾಗಿದ್ದರು. ಸಂತೋಷ್ ಆಟೋ ಚಾಲಕನಾಗಿದ್ದ. ಮದುವೆಯಾದ ದಿನದಿಂದಲೂ ಸಂತೋಷ್ ಮತ್ತು ಆತನ ತಾಯಿ, ಅಜ್ಜಿ ಸರಿತಾಳಿಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದರು ಎನ್ನುವ ಆರೋಪ ಕೇಳಿ ಬಂದಿದೆ.
ಇಬ್ಬರು ಮಕ್ಕಳ ಜೊತೆಗೆ ಮಹಿಳೆ ಸರಿತಾ, ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸದ್ಯ ಪತಿ, ಪತಿಯ ತಾಯಿ ಹಾಗೂ ಅಜ್ಜಿಯ ಕಿರುಕುಳದಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿ ಬಂದಿದೆ. ಪೊಲೀಸರ ತನಿಖೆಯ ನಂತರ ಹೆಚ್ಚಿನ ಮಾಹಿತಿಗಳು ತಿಳಿದು ಬರಬೇಕಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC