ಥಾಣೆ: ಮೊಬೈಲ್ ನೋಡಿದ್ದಕ್ಕೆ ತಾಯಿ ನಿಂದಿಸಿದರು ಎಂದು ನೊಂದು 15 ವರ್ಷ ಬಾಲಕಿ ಸಾವಿಗೆ ಶರಣಾದ ಘಟನೆ ಅಂಬರ್ನಾಥ್ ಪ್ರದೇಶದಲ್ಲಿ ನಡೆದಿದೆ.
ಅಂಬರ್ನಾಥ್ ಪ್ರದೇಶದ ನಿವಾಸಿಯಾಗಿರುವ 15 ವರ್ಷದ ಬಾಲಕಿ ಮೃತಪಟ್ಟ ಬಾಲಕಿಯಾಗಿದ್ದಾಳೆ. ಬಾಲಕಿ ಇಲಿ ಪಾಷಾಣ ಸೇವಿಸಿರುವುದು ತಿಳಿದ ನಂತರ ಕುಟುಂಬಸ್ಥರು ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಮುಂಬೈನ ಆಸ್ಪತ್ರೆಗೆ ರವಾನಿಸಿದ್ದರು. ಆದರೆ ಚಿಕಿತ್ಸೆ ಫಲಿಸದೇ ಬಾಲಕಿ ಸಾವನ್ನಪ್ಪಿದ್ದಾಳೆ.
ಅಮ್ಮ ಹೇಳಿದ ಬುದ್ಧಿ ಮಾತು ಬಾಲಕಿಗೆ ಬೇಸರವನ್ನುಂಟು ಮಾಡಿತ್ತು ಎನ್ನಲಾಗಿದೆ. ಇದರಿಂದ ನೊಂದು ಬಾಲಕಿ ಸಾವಿಗೆ ಶರಣಾಗಿದ್ದಾಳೆ ಎಂದು ಅಂಬರನಾಥ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ವೈದ್ಯಕೀಯ ವರದಿ ಆಧರಿಸಿ ಪೊಲೀಸರು ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿ ಮುಂದಿನ ತನಿಖೆಕೈಗೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q