ಬೆಳಗಾವಿ: ಎರಡು ತಿಂಗಳ ಮಗುವನ್ನು ಹೆತ್ತ ತಾಯಿಯೇ ಕೆರೆಗೆ ಎಸೆದಿರುವ ಘಟನೆಯೊಂದು ಬೆಳಗಾವಿ ತಾಲೂಕಿನ ಕಣಬರಗಿ ಗ್ರಾಮದಲ್ಲಿ ನಡೆದಿದೆ.
ಕಣಬರಗಿ ಗ್ರಾಮದ ನಿವಾಸಿ ಶಾಂತಿ ಕರವಿನಕೊಪ್ಪ ತನ್ನ ಮಗುವನ್ನು ಕೆರೆಗೆ ಎಸೆದ ತಾಯಿಯಾಗಿದ್ದಾಳೆ. ಈಕೆ ಮಗುವನ್ನು ಕೆರೆಗೆ ಎಸೆಯುತ್ತಿರುವುದನ್ನು ಕಂಡ ಕೆಲವು ಯುವಕರು ತಕ್ಷಣವೇ ಕೆರೆಗೆ ಹಾರಿ ಮಗುವನ್ನು ರಕ್ಷಿಸಿದ್ದಾರೆ.
ಬಳಿಕ ಬೆಳಗಾವಿ ಮಕ್ಕಳ ಖಾಸಗಿ ಆಸ್ಪತ್ರೆಗೆ ಮಗುವನ್ನು ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಮಾಳಮಾರುತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು, ತಾಯಿ ಶಾಂತಿಯನ್ನು ಬಂಧಿಸಿದ್ದಾರೆ.
ಇನ್ನೂ ಮಗುವನ್ನು ಕೆರೆಗೆ ಎಸೆದಿರುವ ಬಗ್ಗೆ ಪ್ರಶ್ನಿಸಿದ ವೇಳೆ, ಮಗುವಿಗೆ ನಿರಂತರವಾಗಿ ಫಿಡ್ಸ್ ಬರುತ್ತಿತ್ತು. ನಿನ್ನೆಯಷ್ಟೇ ಆಸ್ಪತ್ರೆಯಿಂದ ಕರೆದುಕೊಂಡು ಬಂದಿದ್ದೆ. ಹಾಗಾಗಿ ಕೆರೆಗೆ ಎಸೆದಿರುವುದಾಗಿ ತಾಯಿ ಶಾಂತ ಹೇಳಿದ್ದಾಳೆ ಎಂದು ವರದಿಯಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx