ಬೆಂಗಳೂರು: ಕ್ಯಾಬ್ ಚಾಲಕನೊಬ್ಬ ನೇಣುಬಿಗಿದುಕೊಂಡು ಸಾವಿಗೆ ಶರಣಾಗಿದ್ದು, ಪುತ್ರನ ಸಾವಿನ ಸುದ್ದಿಕೇಳಿ ಆತನ ತಾಯಿ ಕೂಡ ಮೃತಪಟ್ಟಿರುವ ಘಟನೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ನಡೆದಿದೆ.
ಕಾಮಾಕ್ಷಿಪಾಳ್ಯದ ಕಾವೇರಿಪುರ ನಿವಾಸಿ ಅರುಣ್ ಕುಮಾರ್ (37) ಸಾವಿಗೆ ಶರಣಾದ ಯುವಕನಾಗಿದ್ದಾನೆ. ಇವರ ತಾಯಿ ಸರಸ್ವತಿ(73) ಪುತ್ರನ ಸಾವಿನ ಸುದ್ದಿ ತಿಳಿದು 3 ತಾಸಿನ ಬಳಿಕ ತಾಯಿ ಕೂಡ ಸಾವನ್ನಪ್ಪಿದ್ದಾರೆ.
ಮೃತ ಸ್ವರಸ್ವತಿಗೆ ಮೂವರು ಗಂಡ ಮಕ್ಕಳು. ಈ ಪೈಕಿ ಹಿರಿಯ ಮತ್ತು ಕೊನೆಯ ಮಗ ಪ್ರತ್ಯೇಕವಾಗಿ ವಾಸವಾಗಿದ್ದಾರೆ. 2ನೇ ಪುತ್ರ ಅರುಣ್ ಕುಮಾರ್ ಮತ್ತು ತಾಯಿ ಸರಸ್ವತಿ ಜತೆ ಕಾವೇರಿಪುರದಲ್ಲಿ ವಾಸವಾಗಿದ್ದರು. ಅರುಣ್ ಕುಮಾರ್ ಅವಿವಾಹಿತನಾಗಿದ್ದು, ಕ್ಯಾಬ್ ಚಾಲನಾಗಿದ್ದ. ತಾಯಿಯ ಅನಾರೋಗ್ಯ ಹಾಗೂ ಆರ್ಥಿಕ ಸಂಕಷ್ಟದಿಂದ ಸಾಕಷ್ಟು ಸಾಲ ಮಾಡಿಕೊಂಡಿದ್ದ.
ಒಂದು ವರ್ಷದ ಹಿಂದೆ ಸ್ನಾನದ ಕೋಣೆಯಲ್ಲಿ ತಾಯಿ ಸರಸ್ವತಿ ಕಾಲು ಜಾರಿ ಬಿದ್ದು ಬೆನ್ನು ಮೂಳೆ ಮುರಿದುಕೊಂಡಿದ್ದು, ಅನಾರೋಗ್ಯಕ್ಕೀಡಾಗಿ ಹಾಸಿಗೆ ಹಿಡಿದಿದ್ದರು. ತನ್ನ ಸಾಲ ಹಾಗೂ ತಾಯಿ ಹಾಸಿಗೆ ಹಿಡಿದಿರುವುದರಿಂದ ನೊಂದು ಅರುಣ್ ಕುಮಾರ್ ಭಾನುವಾರ ನೇಣುಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ.
ಮತ್ತೊಂದೆಡೆ ಪುತ್ರ ಅರುಣ್ ಕುಮಾರ್ ಆತ್ಮಹತ್ಯೆ ವಿಚಾರ ತಿಳಿಯುತ್ತಿದ್ದಂತೆ ಅನಾರೋಗ್ಯಕ್ಕೊಳಗಾಗಿ ಹಾಸಿಗೆ ಹಿಡಿದಿದ್ದ ಆತನ ತಾಯಿ ಸರಸ್ವತಿ, ಘಟನೆ ಬೆಳಕಿಗೆ ಬಂದ 3 ತಾಸಿನ ಬಳಿಕ ಮಲಗಿದ್ದ ಹಾಸಿಗೆಯಲ್ಲೇ ಮೃತಪಟ್ಟಿದ್ದಾರೆ. ಮಗನ ಆತ್ಮಹತ್ಯೆ ವಿಚಾರ ತಿಳಿದು ಅದರ ಆಘಾತದಿಂದ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q