ತಿಪಟೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾರಿನ ಮೇಲೆ ಮೊಟ್ಟೆ ಎಸೆದವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ನಗರದ ಸಿಂಗ್ರಿ ನಂಜಪ್ಪ ವೃತ್ತದಲ್ಲಿ ಮಾಜಿ ಶಾಸಕ ಕೆ.ಷಡಕ್ಷರಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು
ಮೊಟ್ಟೆ ಎಸೆದವ ಕಾಂಗ್ರೆಸ್ ಕಾರ್ಯಕರ್ತ ಎಂದು ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ. ಬಿಜೆಪಿಯವರಂತೆ ಸುಳ್ಳು ಹೇಳುವ ಜಾಯಮಾನದವರು ನಾವಲ್ಲ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಯಾವ ರೀತಿ ಭದ್ರತೆ ಕೊಡಬೇಕೆಂಬುದನ್ನು ಗೃಹ ಸಚಿವ ಅರ್ಧಂಬರ್ಧ ಜ್ಞಾನೇಂದ್ರ ಮೊದಲು ತಿಳಿದುಕೊಳ್ಳಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾಂತರಾಜು, ನಗರಸಭಾ ಸದಸ್ಯ ವಿ.ಯೋಗೀಶ್ ಮೇಘಶ್ರೀ , ಲೋಕನಾಥ್ ಸಿಂಗ್, ಸುನಿಲ್ ಮೇಗಲಮನೆ, ಹಿರಿಯ ಕಾಂಗ್ರೆಸ್ ಮುಖಂಡ ಅಣ್ಣಯ್ಯ ಹಲವಾರು ಕಾರ್ಯಕರ್ತರು ಭಾಗವಹಿಸಿದ್ದರು.
ವರದಿ: ಆನಂದ್, ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz