ತುಮಕೂರು: ಶಾಲಾ ಮಕ್ಕಳಿಗೆ ಬಿಸಿಯೂಟದ ಜತೆ ಮೊಟ್ಟೆ ಕೊಡುವ ಯೋಜನೆಯನ್ನು ಸರ್ಕಾರ ಕೈಬಿಡಬಾರದು. ಯಾರ ಒತ್ತಡಕ್ಕೂ ಮಣಿಯಬಾರದು ಎಂದು ಬಹುಜನ ಸಮಾಜ ಪಕ್ಷ (ಃSP) ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಗುರುಮೂರ್ತಿ ಇಲ್ಲಿ ಶನಿವಾರ ಆಗ್ರಹಿಸಿದ್ದಾರೆ.
ಅಪೌಷ್ಟಿಕತೆ ಇರುವ ಮಕ್ಕಳಿಗೆ ಮೊಟ್ಟೆ ನೀಡುವುದು ಕಡ್ಡಾಯವಾಗಿದೆ. ಆದರೆ ಕೆಲ ಮಠಾಧೀಶರು ಮತ್ತು ಮನುವಾದಿಗಳು ಮಕ್ಕಳಿಗೆ ಮೊಟ್ಟೆ ಕೊಡುವುದನ್ನು ನಿಲ್ಲಿಸುವಂತೆ ಸರ್ಕಾರದ ಮೇಲೆ ಒತ್ತಡ ತರುತ್ತಿರುವುದು ಖಂಡನೀಯ ಎಂದು ಅವರು ಹೇಳಿದರು.
ಕೇವಲ ಮೊಟ್ಟೆ ಮಾತ್ರವಲ್ಲ, ಜತೆಗೆ ವಾರಕ್ಕೆ ಎರಡು ದಿನ ಮಾಂಸ ನೀಡಬೇಕು. ಒತ್ತಡಕ್ಕೆ ಮಣಿದು ಮೊಟ್ಟೆ ಕೊಡುವುದನ್ನು ನಿಲ್ಲಿಸಿದರೆ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಸಿದರು
ಬಿಎಸ್ಪಿ ರಾಜ್ಯ ಘಟಕದ ಖಜಾಂಚಿ ಕೆ.ಸಿ.ಹನುಮಂತರಾಯಪ್ಪ, ರುದ್ರಪ್ಪ, ರಾಜ್ಯ ಘಟಕದ ಕಾರ್ಯದರ್ಶಿ ಸೂಲಯ್ಯ, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ರಂಗಧಾಮಯ್ಯ, ಮುಖಂಡರಾದ ಸಿದ್ಧಲಿಂಗಯ್ಯ, ರಂಗಯ್ಯ, ಮಂಜುನಾಥ್ ಉಪಸ್ಥಿತರಿದ್ದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700