ತಿಪಟೂರು: ಎಲ್ಲರಿಗೂ ಶಿಕ್ಷಣ ಸಿಕ್ಕರೆ ಸಮಾಜ ಸರಿಹೋಗುತ್ತದೆ ಎಂಬ ಕಲ್ಪನೆ ಇದೆ. ಆದರೆ ಮೌಲ್ಯಯುತ ಗುಣಾತ್ಮಕ ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು.
ತಿಪಟೂರು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದ್ದ ಶಾಲಾ ಶಿಕ್ಷಣದಲ್ಲಿ ಗುಣಾತ್ಮಕ ರಾಷ್ಟ್ರೀಯ ಶಿಕ್ಷಣ ನೀತಿ ಎನ್ ಇ ಪಿ- 2020 ಶೈಕ್ಷಣಿಕ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಶಿಕ್ಷಣ ಪದ್ಧತಿಯಲ್ಲಿ ಕರ್ನಾಟಕ ರಾಜ್ಯ ತಂದಷ್ಟು ಬದಲಾವಣೆಗಳನ್ನು ಭಾರತದಲ್ಲಿ ಯಾವ ರಾಜ್ಯವು ತಂದಿಲ್ಲ. ಅದಕ್ಕೆ ಶಿಕ್ಷಕರಾದ ನೀವುಗಳೇ ಕಾರಣ. ಯಾವುದೇ ಸರ್ಕಾರಿ ವ್ಯವಸ್ಥೆಯಲ್ಲಿ ಶಿಕ್ಷಣ ಇಲಾಖೆ ಎಷ್ಟು ಪಾರದರ್ಶಕ ಇಲಾಖೆ ಇನ್ಯಾವುದೂ ಇಲ್ಲ ಎಂದು ಅವರು ಹೇಳಿದರು.
ಕರ್ನಾಟಕ ರಾಜ್ಯ ಪ್ರಾಥಮಿಕ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ನುಗ್ಗಲಿ ಮಾತನಾಡಿ, ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ರವರ ವರ್ಗಾವಣೆ ನಿರ್ಧಾರದಿಂದ 16,000 ಶಿಕ್ಷಕರು ತಮ್ಮ ಬೇಡಿಕೆಯ ಊರುಗಳಿಗೆ ವರ್ಗಾವಣೆಯಾಗಿದ್ದಾರೆ ಎಂದರು.
ಸಮಾರಂಭದಲ್ಲಿ ಕೋವಿಡ್ ಸಮಯದಲ್ಲಿ ಸೇವೆ ಸಲ್ಲಿಸಿದ ತಿಪಟೂರಿನ ವೈದ್ಯ ಡಾ.ಶ್ರೀಧರ್ ಅವರನ್ನು ಸನ್ಮಾನಿಸಲಾಯಿತು. ಈ ಸಮಾರಂಭದಲ್ಲಿ ಶಿಕ್ಷಕರ ಸಂಘದ ರಾಜ್ಯ ಅಧ್ಯಕ್ಷ ಲಿಂಗೇಗೌಡ ಪಾಟೀಲ್, ಡಾ.ಗುರುರಾಜ್ ಕರಜಗಿ, ತಿಪಟೂರು ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಜಿ.ಆರ್.ಜಯರಾಮ್, ಪ್ರಧಾನ ಕಾರ್ಯದರ್ಶಿ ಟೀಕೆ ಪಟ್ಟಾಭಿರಾಮ್, b.e.o. ಬಿಟಿ ಪ್ರಭುಸ್ವಾಮಿ, ತಾಲೂಕು ಶಿಕ್ಷಕರ ಸಂಘದ ಎಲ್ಲಾ ಪದಾಧಿಕಾರಿಗಳು ಇಲಾಖೆ ಅಧಿಕಾರಿಗಳು ಈ ಸಮಾರಂಭದಲ್ಲಿ ಭಾಗವಹಿಸಿದ್ದರು.
ವರದಿ: ಆನಂದ್ ತಿಪಟೂರ್
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy