ವಯನಾಡು: ದೇವರನಾಡು ಕೇರಳದಲ್ಲಿ ಪರ್ವತ ಕುಸಿದ ಪರಿಣಾಮ ಬರೋಬ್ಬರಿ 42 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಕಂಡ ಕಂಡಲ್ಲಿ ಮೃತದೇಹಗಳು ಪತ್ತೆಯಾಗುತ್ತಿವೆ.
ವಯನಾಡಿನ ಮುಂಡಕ್ಕೈ ಮತ್ತು ಚೂರಲ್ಮಲಾ ಜನ ವಸತಿ ಪ್ರದೇಶದಲ್ಲಿ ಭಾರೀ ಭೂಕುಸಿತ ಸಂಭವಿಸಿದೆ. ಒಂದರ ಹಿಂದೊಂದರಂತೆ ಒಟ್ಟು ಮೂರು ಬಾರಿ ಗುಡ್ಡ ಕುಸಿದಿದೆ. ಇದರ ಪರಿಣಾಮ 200ಕ್ಕೂ ಹೆಚ್ಚು ಮನೆಗಳು ನೆಲಸಮವಾಗಿದ್ದು, 150ಕ್ಕೂ ಹೆಚ್ಚು ಜನರು ಮಣ್ಣಿನಡಿಯಲ್ಲಿ ಸಿಲುಕಿದ್ದು, ಕ್ಷಣ ಕ್ಷಣಕ್ಕೂ ಸಾವಿನ ಸಂಖ್ಯೆ ಹೆಚ್ಚಳವಾಗಿದೆ.
ಸದ್ಯ ಸ್ಥಳದಲ್ಲಿ ರಕ್ಷಣಾ ತಂಡಗಳು ಕಾರ್ಯ ನಿರ್ವಹಿಸುತ್ತಿವೆ. ಅಗ್ನಿಶಾಮಕ ದಳ, ಎನ್ಡಿಆರ್ಎಫ್ ಮತ್ತು ಸ್ಥಳೀಯ ತಂಡಗಳು ಸೇರಿ ಸುಮಾರು 250 ಜನರು ರಕ್ಷಣೆ ಮಾಡಲು ಮುಂದಾಗಿದ್ದಾರೆ.
ಮುಂಡಕ್ಕೈ ಮತ್ತು ಚೂರಲ್ಮಲಾ ಪ್ರದೇಶದಲ್ಲಿ ಮುಂಜಾನೆ ಭೂಕುಸಿತ ಸಂಭವಿಸಿದೆ. ಬೆಳಗ್ಗಿನ ಜಾವ 2–4 ಗಂಟೆಯ ನಡುವೆ ಭೂಕುಸಿತ ಸಂಭವಿಸಿದೆ. ಪ್ರಧಾನಿ ನರೇಂದ್ರ ಮೋದಿಯವರು ಮುಖ್ಯಮಂತ್ರಿ ಪಿಣರಾಯಿಗೆ ಕರೆ ಮಾಡಿದ್ದಾರೆ. ಘಟನೆ ಬಗ್ಗೆ ಆಲಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA