ಬೆಂಗಳೂರು: ಹಲವು ಸಿನಿಮಾಗಳನ್ನು ನಿರ್ಮಿಸಿದ್ದ ನಿರ್ಮಾಪಕರೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಿರ್ಮಾಪಕ ಸೌಂದರ್ಯ ಜಗದೀಶ್ ತಮ್ಮ ಮಹಾಲಕ್ಷ್ಮೀ ಲೇಔಟ್ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾದವರಾಗಿದ್ದಾರೆ.
ಅಪ್ಪು ಪಪ್ಪು, ಮಸ್ತ್ ಮಜಾ ಮಾಡಿ ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ಮಿಸಿದ್ದ ನಿರ್ಮಾಪಕ ಸೌಂದರ್ಯ ಜಗದೀಶ್ ತಮ್ಮ ಮಹಾಲಕ್ಷ್ಮೀ ಲೇಔಟ್ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು, ಹಣಕಾಸಿನ ವಿಚಾರದಲ್ಲಿ ಸಂಕಷ್ಟ ಎದುರಿಸುತ್ತಿದ್ದರು ಎನ್ನಲಾಗಿದೆ.
ಮೃತದೇಹವನ್ನು ರಾಜಾಜಿನಗರದ ಸುಗುಣ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕೊಂಡೊಯ್ಯಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296