ಔರಾದ್: ತಾಲೂಕಿನಲ್ಲಿ ಕಳೆದ ಮೂರುನಾಲ್ಕು ದಿನಗಳಿಂದ ಸುರಿದ ಮಳೆಗೆ ಹಾನಿಗೊಳಗಾದ ಪ್ರದೇಶಗಳಿಗೆ ಗುರುವಾರ ಸಂಸದ ಸಾಗರ ಖಂಡ್ರೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತಾಲೂಕಿನ ಬಾಚೆಪಳ್ಳಿ, ನಾಗೂರ (ಬಿ), ಮಸ್ಕಲ್, ಜೋಜನಾ, ಗುಡಪಳ್ಳಿ, ಮೆಡಪಳ್ಳಿ, ಕೊಳ್ಳುರ್, ಎಕಲಾರ, ತುಳಜಾಪೂರ, ಬೋರಾಳ ಗ್ರಾಮಗಳಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ವೀಕ್ಷಣೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಾಗರ ಖಂಡ್ರೆ, ತಾಲೂಕಿನಲ್ಲಿ ಮಾಂಜ್ರಾ ನದಿಯ ಬಳಿಯ ಜಮೀನಿನ ಬೆಳೆಗಳು ಹೆಚ್ಚು ಹಾನಿಗೊಳಗಾಗಿವೆ. ಅಲ್ಲದೇ ಕೆಲ ತಗ್ಗು ಪ್ರದೇಶದಲ್ಲಿ ನೀರು ಸಂಗ್ರಹವಾಗಿದ್ದು ಬೆಳೆ ನಾಶವಾಗಲಿದೆ. ಇವುಗಳ ಸಮೀಕ್ಷೆ ಮಾಡಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ತಾಲೂಕಿನ ಕೆಲ ಗ್ರಾಮಗಳಲ್ಲಿ ಟ್ರಾನ್ಸ್ ಫಾರ್ಮರ್ ಗಳು ಮತ್ತು ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಅನೇಕ ಗ್ರಾಮಗಳಲ್ಲಿ ಮನೆಗಳು ಬಿದ್ದಿವೆ. ತಾಲೂಕಿನಲ್ಲಿ ಅಪಾರ ಪ್ರಮಾಣದ ಹಾನಿಯಾಗಿದೆ ಇವುಗಳ ಸಮಗ್ರ ವರದಿಯನ್ನು ನನಗೆ ಹಾಗೂ ಇಲಾಖೆಯ ಮೇಲಾಧಿಕಾರಿಗಳಿಗೆ ಸಲ್ಲಿಸುವಂತೆ ಸ್ಥಳದಲ್ಲಿರುವ ಅಧಿಕಾರಿಗಳಿಗೆ ಸೂಚಿಸಿದರು.
ಪ್ರಮುಖರಾದ ಕಾಂಗ್ರೆಸ್ ಡಾ.ಭೀಮಸೇನರಾವ ಶಿಂಧೆ, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಪಾಟೀಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಣಮಂತ ರಾವ ಚವ್ಹಾಣ, ರಾಜಕುಮಾರ ಹಲಬರ್ಗೆ, ತಹಶೀಲ್ದಾರ ಮಲ್ಲಶೆಟ್ಟಿ ಚಿದ್ರೆ, ತಾಪಂ ಇಒ ಬಿರೇಂದ್ರಸಿಂಗ್ ಠಾಕೂರ್, ಶಿವಕುಮಾರ ಘಾಟೆ, ಎಇಇ ಸುಭಾಷ ದಾಲಗೊಂಡೆ, ಎಇಇ ವೆಂಕಟ ಶಿಂಧೆ, ಬಸವರಾಜ ದೇಶಮುಖ, ಸುಧಾಕಾರ ಕೊಳ್ಳುರ್, ಚನ್ನಬಸವ ಬಿರಾದಾರ್, ಲಾಧಾ ಗ್ರಾಪಂ ಅಧ್ಯಕ್ಷ ನಾಗಪ್ಪ ಮುಸ್ತಾಪೂರೆ, ಶಿವಶಂಕರ ಎಕಲಾರ, ಧನರಾಜ ಮುಸ್ತಾಪೂರ್, ರತ್ನದೀಪ ಕಸ್ತೂರೆ ಸೇರಿದಂತೆ ಅನೇಕರಿದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


