ಬೀದರ: ಲೋಕಸಭಾ ಮತಕ್ಷೇತ್ರದ ಸಂಸದರಾದ ಸಾಗರ್ ಖಂಡ್ರೆ ಅವರು, ರಾಜೀವ್ ಗಾಂಧಿ ವಸತಿ ನಿಗಮ (ನಿ), ಬೆಂಗಳೂರು ಅಡಿಯಲ್ಲಿ ‘ಆವಾಸ್ ಪ್ಲಸ್ 2024’ ವಸತಿ ಆಪ್ ಮೂಲಕ ವಸತಿ/ನಿವೇಶನ ರಹಿತರ ಸಮೀಕ್ಷೆ ಪ್ರಾರಂಭಗೊಂಡಿದ್ದು, ಬೀದರ್ ಜಿಲ್ಲಾ ಭಾಲ್ಕಿ ತಾಲ್ಲೂಕಿನ ಲಂಜವಾಡ್ ಗ್ರಾಮದಲ್ಲಿ ಅಧಿಕೃತವಾಗಿ ಚಾಲನೆ ನೀಡಿ ಪಿ.ಎಂ.ಎ.ವೈ (ಗ್ರಾಮೀಣ) ಅಡಿಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಮನೆ ಮಂಜೂರಾತಿ ತಿಳುವಳಿಕೆ ಪತ್ರ ನೀಡಿ ಶುಭ ಹಾರೈಸಿದರು.
ಸಮೀಕ್ಷೆಗೆ ಮುನ್ನ, ಪಿ.ಎಂ.ಎ.ವೈ.(ಗ್ರಾಮೀಣ) ಅಡಿಯಲ್ಲಿ ಆಯ್ಕೆಯಾದ ಸೋಮಪುರ ಗ್ರಾಮದ ಫಲಾನುಭವಿಗಳ ಜಿ.ಪಿ.ಎಸ್. ಕಾರ್ಯವನ್ನು ನೆರವೇರಿಸಿದರು.
ಆವಾಸ್ ಪ್ಲಸ್ 2024 ಸಮೀಕ್ಷೆ ಸಂಪೂರ್ಣ ಪ್ರಾಮಾಣಿಕವಾಗಿ ನಡೆಯಬೇಕು. ಫಲಾನುಭವಿಗಳಿಗೆ ಸರ್ಕಾರದ ಕಲ್ಯಾಣ ಯೋಜನೆಗಳ ಸದುಪಯೋಗ ದೊರಕಬೇಕು. ಅಲ್ಲದೆ, ಸಮೀಕ್ಷೆಯ ಪಾರದರ್ಶಕತೆ ಕಾಪಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ಸಮಾರಂಭದಲ್ಲಿ ಜನಪ್ರತಿನಿಧಿಗಳು, ಜಿಲ್ಲಾ ಪಂಚಾಯತ್ ಸಿಇಒ, ತಹಶೀಲ್ದಾರರು, ವಿವಿಧ ಅಧಿಕಾರಿಗಳು ಮತ್ತು ಸ್ಥಳೀಯ ನಾಗರಿಕರು ಉಪಸ್ಥಿತರಿದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4