ಬೀದರ್: ಸಂಸದರಾದ ಸಾಗರ್ ಈಶ್ವರ ಖಂಡ್ರೆ ಅವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಜಿಲ್ಲೆಯ ಸಮಸ್ಯೆಗಳ ಬಗ್ಗೆ ಗಮನ ಸೆಳೆದರು.
ಬೀದರ್ ಜಿಲ್ಲಾ ಭಾಲ್ಕಿ ಪಟ್ಟಣದಲ್ಲಿರುವ ರೈಲ್ವೆ ಗೇಟ್ ಬಳಿ ಟ್ರಾಫಿಕ್ ಸಮಸ್ಯೆಯಿಂದಾಗಿ ಜನರು ಸಾಕಷ್ಟು ಸಮಸ್ಯೆ ಎದುರಿಸುತ್ತಿರುವ ಬಗ್ಗೆ ಸಚಿವರಿಗೆ ಮನವರಿಕೆ ಮಾಡಿದರಲ್ಲದೇ ರೈಲ್ವೆ ಗೇಟ್ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಅನುದಾನ ಒದಗಿಸುವಂತೆ ಮನವಿ ಮಾಡಿಕೊಂಡರು.
ಸಂಸದರ ಮನವಿಗೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಸಮಸ್ತೆ ಪರಿಹಾರಕ್ಕೆ ಶೀಘ್ರವೇ ಕ್ರಮಕೈಗೊಳ್ಳುವ ಭರವಸೆ ನೀಡಿದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296