ಉತ್ತರ ಪ್ರದೇಶ: ವಿಶ್ವದ ಅತಿದೊಡ್ಡ ಆಧ್ಯಾತ್ಮಿಕ–ಸಾಂಸ್ಕೃತಿಕ ಸಂಗಮವಾದ ಪ್ರಯಾಗರಾಜ್ ಮಹಾಕುಂಭಮೇಳದಲ್ಲಿಂದು ರೈಲ್ವೆ ಮತ್ತು ಜಲಶಕ್ತಿ ಸಚಿವ ವಿ.ಸೋಮಣ್ಣನವರು ಪಾಲ್ಗೊಂಡು, ಧರ್ಮಪತ್ನಿ ಶೈಲಜಾ ಸೋಮಣ್ಣ ಅವರೊಂದಿಗೆ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದರು.
144 ವರ್ಷಗಳಿಗೊಮ್ಮೆ ನಡೆಯುವ ಮಹಾಕುಂಭಮೇಳದಲ್ಲಿ ಭಾಗವಹಿಸುತ್ತಿರುವುದೇ ನಮ್ಮ ಜೀವಿತಾವಧಿಯ ಪುಣ್ಯ ಎನ್ನಲು ಹೆಮ್ಮೆಯೆನಿಸುತ್ತದೆ. ಧಾರ್ಮಿಕ, ಸಾಂಸ್ಕೃತಿಕವಾಗಿ ಜಗದ್ವಿಖ್ಯಾತವಾದ ಈ ಆಚರಣೆಯ ಪುಣ್ಯದಿಂದ ಲೋಕಕಲ್ಯಾಣವಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx