ತುಮಕೂರು: ಎರಡು ಕಡೆ ವಿಧಾನಸಭೆ ಚುನಾವಣೆಯಲ್ಲಿ ಸೋತ ನನಗೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಕಲ್ಪಿಸಿಕೊಟ್ಟ ರಾಷ್ಟ್ರದ ನಾಯಕರು ಹಾಗೂ ಪಕ್ಷದ ಮುಖಂಡರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ನೂತನ ಸಂಸದ ವಿ. ಸೋಮಣ್ಣ ಹೇಳಿದ್ದಾರೆ.
ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಶಿವಕುಮಾರ ಸ್ವಾಮೀಜಿಯವರು ಹಾಗೂ ಆದಿಚುಂಚನಗಿರಿಯ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರ ಆಶೀರ್ವಾದದಿಂದ, ಪುನಃ ನನ್ನನ್ನು ರಾಜಕೀಯವಾಗಿ ಗೆಲುವು ಸಾಧಿಸಲು ಹಾಗೂ ಜನರ ಕೆಲಸ ಮಾಡಲು ಅವಕಾಶ ಸಿಕ್ಕಿದೆ ಎಂದರು.
ದೇಶದ ವ್ಯವಸ್ಥೆಯಲ್ಲಿ ಮೋದಿಯವರ ಜನ ಪರ ಕಾರ್ಯಕ್ರಮಗಳು ಹಾಗೂ ಈ ಹಿಂದಿನ ಸಂಸದ ಬಸವರಾಜ್ ಅವರ ಮಾರ್ಗದರ್ಶನದಲ್ಲಿ ಗೆಲುವು ಲಭಿಸಿದೆ ಎಂದರು.
ರಾಜ್ಯದ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ಎರಡು ಪಕ್ಷದ ಮುಖಂಡರಿಗೆ ಧನ್ಯವಾದ ತಿಳಿಸುತ್ತೇನೆ. ಹೊರಗಿನವರು ಎಂದು ನನಗೆ ಚುನಾವಣೆ ಸಂದರ್ಭದಲ್ಲಿ ಹೇಳಿದ್ದು ಒಳ್ಳೆಯದೇ ಆಯಿತು ಎಂದರು. ಈ ರೀತಿ ಹೇಳಿದವರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಮತದಾರರು ಅಂತಿಮವಾಗಿ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದರು.
ಇಂಡಿಯಾ ಒಕ್ಕೂಟವು ನಡೆಸಿದ ಅಪಪ್ರಚಾರ ನಡುವೆಯೂ ಮೋದಿಯವರು ಪ್ರಧಾನಿಯಾಗಲಿದ್ದಾರೆ ಎಂದರು. ಸುಳ್ಳು ಕೂಡ ನಿಜವಾಗುತ್ತದೆ ಎಂಬುದಕ್ಕೆ ಮತದಾರರು ತಕ್ಕ ಉತ್ತರ ನೀಡಿದ್ದಾರೆ ಎಂದರು.
ನನ್ನ ಕೆಲಸ ನೋಡಿ ತುಮಕೂರಿನ ಮತದಾರರು ಈ ನಿರ್ಧಾರ ತೆಗೆದುಕೊಂಡಿದ್ದಾರೆ ಮತದಾರರು ನಿರೀಕ್ಷೆಗೆ ತಕ್ಕಂತೆ ನಾನು ಕೆಲಸ ಮಾಡುತ್ತೇನೆ ಹೆಜ್ಜೆ ಹಾಕುತ್ತೇನೆ. ಮಾಧುಸ್ವಾಮಿಯವರ ಜೊತೆ ಟಿಕೆಟ್ ಘೋಷಣೆ ಮಾಡಿದ ನಂತರ ನಾನು ಸುಮಾರು ಎರಡುವರೆ ಗಂಟೆಗಳ ಕಾಲ ಮಾತುಗತೆ ನಡೆಸಿದೆ ಆ ಸಂದರ್ಭದಲ್ಲಿ ಅವರಲ್ಲಿದ್ದ ತ್ಯಾತ್ಸರ ಮನೋಭಾವ ಮತ್ತು ನೀಚತನ ಇವೆಲ್ಲವನ್ನು ಅವರು ಬಿಟ್ಟು ಬರಬೇಕು ಎಂಬುದು ನನ್ನ ಅಭಿಪ್ರಾಯವಾಗಿದೆ ಎಂದರು. ಜೆಡಿಎಸ್ ಹಾಗೂ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಈ ಚುನಾವಣೆಯಲ್ಲಿ ಚುನಾವಣೆ ನಿಜಕ್ಕೂ ಅಭಿನಂದನಾ ಅರ್ಹ ಎಂದು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


