ಮೈಸೂರು: ಕೆಆರ್‌ಎಸ್ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು ಮರುನಾಮಕರಣ ವಿಚಾರಕ್ಕೆ ಸಂಬಂಧಿಸಿದ ವಿವಾದ ಮುಂದುವರಿದಿದ್ದು, ಇದೀಗ ಮೈಸೂರು ಮಹಾನಗರ ಪಾಲಿಕೆಯ (ಎಂಸಿಸಿ) ದಾಖಲೆಗಳಲ್ಲಿ ಕೆಆರ್‌ಎಸ್ ರಸ್ತೆಯನ್ನು ಪ್ರಿನ್ಸೆಸ್ ರೋಡ್ ಎಂದು ಹೆಸರಿಸಿಲ್ಲ ಎಂದು ಕಾಂಗ್ರೆಸ್ ನಿಯೋಗ ಹೇಳಿಕೊಂಡ ಬೆನ್ನಲ್ಲೇ ಮೈಸೂರು–ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಸಾಕ್ಷಿ ಬಿಡುಗಡೆ ಮಾಡಿದ್ದಾರೆ.
ಪ್ರಿನ್ಸೆಸ್ ರೋಡ್ ಇರುವ ಮ್ಯಾಪ್ ಹಾಗೂ ದಾಖಲೆಗಳನ್ನು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಗುರುವಾರ ಬಿಡುಗಡೆ ಮಾಡಿದ್ದಾರೆ.
ಕೆಆರ್‌ಎಸ್ ರಸ್ತೆಗೆ ಅಧಿಕೃತ ಹೆಸರು ನೀಡಿರುವ ಉಲ್ಲೇಖವಾಗಲಿ, ದಾಖಲೆಯಾಗಲಿ ಇಲ್ಲ ಎಂದು ನಗರಪಾಲಿಕೆ ಆಯುಕ್ತ ಅಸಾದ್ ಉರ್ ರೆಹಮಾನ್ ಶರೀಫ್ ಇತ್ತೀಚಿಗೆ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಗುರುವಾರ ಸಂಸದ ಯದುವೀರ್ ನಗರಪಾಲಿಕೆ ಕಚೇರಿಯಲ್ಲಿ ಆಯುಕ್ತರನ್ನು ಭೇಟಿ ಮಾಡಿ ಪ್ರಿನ್ಸೆಸ್ ರಸ್ತೆಗೆ ಸಂಬಂಧಿಸಿದ ಮನವಿ ಪತ್ರ ಸಲ್ಲಿಸಿದ್ದಾರೆ. ಅಲ್ಲದೆ, ಹೆಸರಿಡುವ ವಿಚಾರವನ್ನು ಪುನರ್ ಪರಿಶೀಲಿಸುವಂತೆ ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx