ರಾಜ್ಯದ ಹಕ್ಕು ಕೇಳಿ ಎಂದರೆ ಬಿಜೆಪಿ ಸಂಸದರು ಚಳಿಜ್ವರ ಬಂದಂಗೆ ನಡುಗುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಬಜೆಟ್ ಮೇಲಿನ ಚರ್ಚೆ ವೇಳೆ ಅವರು ಮಾತನಾಡಿದರು.
15 ನೇ ಹಣಕಾಸು ಆಯೋಗದಿಂದ ಕರ್ನಾಟಕ ನಾಡಿಗೆ ಅಪಾರ ಅನ್ಯಾಯ ಆಯಿತು. ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ನಮ್ಮ ಪಾಲಿನ, ನಮ್ಮ ಹಕ್ಕಾಗಿದ್ದ 5495 ಕೋಟಿ ಬರಲಿಲ್ಲ. ಕರ್ನಾಟಕದಿಂದಲೇ ಆಯ್ಕೆ ಆಗಿರುವ ನಿರ್ಮಲಾ ಸೀತಾರಾಮನ್ ಅವರಿಂದ ಇಷ್ಟು ದೊಡ್ಡ ಅನ್ಯಾಯ ಆಯಿತು. ಇದನ್ನು ಕರ್ನಾಟಕದಿಂದ ಆಯ್ಕೆ ಆಗಿರುವ ಸಂಸದರು ಪ್ರಶ್ನಿಸಬೇಕಿತ್ತು. ರಾಜ್ಯ ಬಿಜೆಪಿ ನಾಯಕರು, ಮುಖ್ಯಮಂತ್ರಿಗಳು ಪ್ರಶ್ನಿಸಬೇಕಿತ್ತು. ಆದರೆ ಇವರೆಲ್ಲಾ ಮೋದಿ ಅವರ ಎದುರು ನಿಂತು ಕನ್ನಡಿಗರ ಪಾಲನ್ನು ಕೇಳಲು ಚಳಿ ಜ್ವರ ಬಂದವರಂತೆ ನಡುಗುತ್ತಾರೆ ಎಂದು ವ್ಯಂಗ್ಯವಾಡಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


