ಬೆಂಗಳೂರು : ವಿಧಾನಸೌಧದ ಆಡಳಿತ ಕೇಂದ್ರ ಎಂಎಸ್ ಬಿಲ್ಡಿಂಗನ ಸಂಪ್ ನಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸಾವನ್ನಪ್ಪಿ ಎರಡು, ಮೂರು ದಿನಗಳಾಗಿರಬಹುದು ಎನ್ನಲಾಗಿದೆ. ಕಟ್ಟಡದ ಸಂಪ್ ನಲ್ಲಿ ಶವ ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.
ಕಳೆದ ಎರಡು ದಿನಗಳಿಂದ ಇದೇ ನೀರನ್ನು ಎಂಎಸ್ ಬಿಲ್ಡಿಂಗ್, ಲೋಕಾಯುಕ್ತ ಸೇರಿದಂತೆ ಮತ್ತೆ ಕೆಲವು ಕಟ್ಟಡದಲ್ಲಿ ಕೆಲಸ ಮಾಡುವ ಸಿಬ್ಬಂದಿಗಳು ಬಳಸಿದ್ದಾರೆ. ಬಹುಮಹಡಿ ಕಟ್ಟಡದಲ್ಲಿನ ವಾಟರ್ ಟ್ಯಾಂಕ್‌ನಲ್ಲಿ ಈ ಅಪರಿಚಿತ ಶವ ಪತ್ತೆಯಾಗಿದ್ದು, ಎರಡು ದಿನಗಳ ನಂತರ ವಿಷಯ ತಿಳಿದು ಬಂದಿದೆ.
ಈ ಬಗ್ಗೆ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ. ಯಾರಾದರೂ ನೌಕರರಿರಬಹುದೇನೋ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ನೌಕರ ವರ್ಗದಲ್ಲಿ ಯಾರಾದರೂ ಎರಡು ದಿನಗಳಿಂದ ನಾಪತ್ತೆಯಾಗಿದ್ದಲ್ಲಿ, ದಯಮಾಡಿ ತಿಳಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


