ಮಧುಗಿರಿ: ಎಂಎಸ್ ಜಿಪಿ ಕಸ ವಿಲೇವಾರಿ ಘಟಕದ ಕಾಮಗಾರಿಯಿಂದ ಅಂತರ್ಜಲ ಹಾಗೂ ಡ್ಯಾಂಗಳಿಗೆ ಸೇರುತ್ತಿರುವ ಮಳೆಯ ನೀರು ಕಲುಷಿತವಾಗುತ್ತಿದೆ ಎಂದು ಕರ್ನಾಟಕ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಜಿ.ಸಿ.ಶಂಕರಪ್ಪ ಆರೋಪಿಸಿದ್ದಾರೆ.
ಬೆಂಗಳೂರಿನ ಬಿಬಿಎಂಪಿ ಮತ್ತು ಖಾಸಗಿ ಕಂಪನಿಯ ಸಹಭಾಗಿತ್ವದಲ್ಲಿ ಜಿಲ್ಲೆಯ ಕೊರಟಗೆರೆ ಮತ್ತು ದೊಡ್ಡಬಳ್ಳಾಪುರ ತಾಲ್ಲೂಕಿನ ಗಡಿ ಗ್ರಾಮಕ್ಕೆ ಹೊಂದಿಕೊಂಡಿರುವ ದೊಡ್ಡಬಳ್ಳಾಪುರ ಗಡಿಯ ಬಳಿಯ ಖಾಸಗಿ ಕಂಪನಿಯೊಂದು ಕಸವಿಲೇವಾರಿ ಘಟಕವನ್ನು ಪ್ರಾರಂಭಿಸಿದೆ ಆದರೆ ಇತ್ತೀಚೆಗೆ ಸುರಿದ ಮಳೆಯ ನೀರಿನಿಂದಾಗಿ ತ್ಯಾಜ್ಯದಿಂದ ಕೂಡಿದ ವಿಷಯುಕ್ತ ನೀರು ಹಳ್ಳ ಕೊಳ್ಳಗಳ ಮೂಲಕ ಕೊರಟಗೆರೆಯ ಹಲವು ಪ್ರಮುಖ ಡ್ಯಾಂ ಮತ್ತು ಕೆರೆಕಟ್ಟೆಗಳಿಗೆ ಸೇರುತ್ತಿದ್ದು, ನೀರು ಕಲುಷಿತವಾಗುತ್ತಿದೆ. ಇಂತಹ ಘಟನೆಗಳಿಂದಾಗಿ ಜನರು ಸೇರಿದಂತೆ ಪ್ರಾಣಿ ಪಕ್ಷಿಗಳಿಗೂ ರೋಗ ರುಜಿನಗಳು ತಗಲುವ ಸಾಧ್ಯತೆಗಳು ಹೆಚ್ಚಿದೆ ಎಂದು ಆರೋಪಿಸಿದ್ದಾರೆ.
ನಮ್ಮ ರೈತ ಸಂಘದ ಪದಾಧಿಕಾರಿಗಳೊಂದಿಗೆ ಘಟಕದ ಸ್ಥಳಕ್ಕೆ ಸದ್ಯದಲ್ಲಿಯೇ ಭೇಟಿ ನೀಡಲಾಗುವುದು ಹಾಗೂ ಶನಿವಾರ ಸ್ಥಳದಲ್ಲಿಯೇ ಪ್ರತಿಭಟನೆ ನಡೆಸಿದ್ದ ಹೋರಾಟಗಾರರ ಟೆಂಟ್ ಗಳನ್ನು ಪೊಲೀಸರು ಕಿತ್ತುಹಾಕಿ ಬಂಧಿಸಿರುವುದು ಪೊಲೀಸರ ಸರಿಯಾದ ಕ್ರಮವಲ್ಲಾ ಕೊಡಲೇ ಅವರನ್ನು ಬಿಡುಗಡೆ ಮಾಡಬೇಕೆಂದು ಸರಕಾರವನ್ನು ಆಗ್ರಹಿಸಿದ್ದಾರೆ.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700