ಬೆಂಗಳೂರು: ಮುಡಾ ಹಗರಣಕ್ಕೂ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್ ಐಆರ್ ವಿಚಾರಕ್ಕೂ ಅಜಗಜಾಂತರ ವ್ಯತ್ಯಾಸವಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಜನ ಪಕ್ಷಪಾತ ಮಾಡಿದ್ದಾರೆ. ಕೋಟ್ಯಂತರ ರೂಪಾಯಿ ಬೆಲೆಬಾಳುವ ಜಮೀನನ್ನು ಸಿಎಂ ಕಬಳಿಸಿದ್ದಾರೆ. ನಿರ್ಮಲಾ ಸೀತಾರಾಮನ್ ಅವರು ತಮ ಸ್ವಂತಕ್ಕಾಗಿ ಏನೂ ಮಾಡಿಲ್ಲ. ಆ ಹಣ ಪಕ್ಷಕ್ಕೆ ಬಂದಿದೆ. ಕಾಂಗ್ರೆಸ್ ಪಕ್ಷಕ್ಕೂ 1,200 ಕೋಟಿ ರೂ.ಗೂ ಅಧಿಕ ಹಣ ಬಂದಿದೆ. ಆ ಹಣವನ್ನು ಮೊದಲು ವಾಪಸ್ ನೀಡಲಿ, ಆ ನಂತರ ಸಚಿವರ ರಾಜೀನಾಮೆ ಕೇಳಲಿ ಎಂದರು.
ಎಲ್ಲ ಪಕ್ಷಗಳು ದೇಣಿಗೆ ಸಂಗ್ರಹ ಮಾಡಿವೆ. ಹೀಗೆ ಹಣ ತೆಗೆದುಕೊಂಡವರ ಮೇಲೆ ಎಫ್ ಐಆರ್ ದಾಖಲಿಸುವುದಾದರೆ, ಎಲ್ಲರ ಮೇಲೂ ದಾಖಲಿಸಬೇಕಾಗುತ್ತದೆ. ಸಿಎಂ ಸಿದ್ದರಾಮಯ್ಯ ಅವರೇ ಯಾರಿಂದಲೋ ಹೇಳಿಸಿ ದೂರು ದಾಖಲಿಸಿದ್ದಾರೆ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ. ಹೀಗೆ ದೂರು ದಾಖಲಿಸಿರುವುದು ರಾಜಕೀಯ ಪ್ರೇರಿತ ಎಂದು ತಿಳಿಸಿದರು.
ಸಿಎಂ ಸಿದ್ದರಾಮಯ್ಯನವರ ಪ್ರಕರಣ ಕ್ಯಾಬೆನೆಟ್ ನಲ್ಲಿ ಚರ್ಚೆಯಾಗಿರಲಿಲ್ಲ. ಆದರೆ ಚುನಾವಣಾ ಬಾಂಡ್ ಬಗ್ಗೆ ಕ್ಯಾಬಿನೆಟ್ ನಲ್ಲೇ ಚರ್ಚೆಯಾಗಿ ಸರ್ಕಾರಿ ಆದೇಶ ಹೊರಡಿಸಲಾಗಿದೆ. ಮುಡಾ ಹಗರಣದ ಆರೋಪದಿಂದ ತಪ್ಪಿಸಿಕೊಳ್ಳಲು ಕಾಂಗ್ರೆಸ್ ನಾಯಕರು ಹೀಗೆ ಮಾತಾಡುತ್ತಿದ್ದಾರೆ. ಮೊದಲು ಲೋಕಾಯುಕ್ತ ಮುಚ್ಚಿಹಾಕಲು ಪ್ರಯತ್ನ ಮಾಡಿದ್ದರು. ಈಗ ಸಿಬಿಐ ಅಧಿಕಾರ ಕಿತ್ತುಕೊಳ್ಳಲು ಕ್ರಮ ವಹಿಸಿದ್ದಾರೆ. ಎಂದು ಆರೋಪಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296