ಪಾವಗಡ: ತಾಲೂಕಿನ ನಿಡಗಲ್ ಹೋಬಳಿಯ ಗುಜ್ಜನಡು ಗ್ರಾಮದ ಹೊರವಲಯದ ಮುಗದಾಳಬೆಟ್ಟ ಗ್ರಾಮಕ್ಕೆ ಸೇರಿದ ಹೊಸಕೆರೆ ಇತ್ತೀಚೆಗೆ ಸುರಿದ ಮಳೆಗೆ ತುಂಬಿದ್ದು ಕೆರೆಯ ಮಧ್ಯ ಭಾಗದಲ್ಲಿ ಮಂಗೆ ಬಿದ್ದು ಅಪಾರ ಪ್ರಮಾಣದ ನೀರು ಪೋಲಾಗುತ್ತಿದ್ದು ಇದರಿಂದ ರೈತರು ಆತಂಕಕ್ಕೆ ಒಳಗಾಗಿದ್ದಾರೆ.
ತಳಕ್ಕೆ ಕೆಟಿ ಹಳ್ಳಿ ಗ್ರಾಮ ಪಂಚಾಯಿತಿಯ ಪಿಡಿಒ ಮಂಜುನಾಥ ಭೇಟಿ ನೀಡಿ ಪರಿಶೀಲಿಸಿದ್ದು, ಮೇಲಾಧಿಕಾರಿಗಳಿಗೆ ಮಾಹಿತಿ ನೀಡಿದ ನಂತರ ಸ್ಥಳಕ್ಕೆ ಬುಧವಾರ ಸಂಜೆ 5 ಗಂಟೆಯಲ್ಲಿ ಪಾವಗಡ ತಹಶೀಲ್ದಾರ್ ಡಿ.ಎನ್.ವರದರಾಜು ಅವರು ಭೇಟಿ ನೀಡಿ ಪರಿಶೀಲಿಸಿದ್ದು, ಪೋಲಾಗುತ್ತಿರುವಂತಹ ನೀರನ್ನು ತಡೆಯಲು ಕ್ರಮವಹಿಸುತ್ತಿದ್ದಾರೆ.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q