ಚಿತ್ರದುರ್ಗ : ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಧರ್ಮಪುರ ಹೋಬಳಿ ಅಬ್ಬಿನಹೊಳೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹೊಸಹಳ್ಳಿ ಗ್ರಾಮದಲ್ಲಿ ಮೂಲಭೂತ ಸೌಕರ್ಯ ಕಲ್ಪಿಸುವ ಕಾರ್ಯದಲ್ಲಿ ಹಿರಿಯೂರು ತಾಲ್ಲೂಕಿನ ಧರ್ಮಪುರ ಹೋಬಳಿಯ ಅಬ್ಬಿನಹೊಳೆ ಗ್ರಾಮ ಪಂಚಾಯಿತಿ ಕಾರ್ಯಾಲಯವು ವಿಫಲವಾಗಿದೆ ಎಂದು ಸ್ಥಳೀಯ ಗ್ರಾಮ ಪಂಚಾಯತಿ ಸದಸ್ಯ ತಿಪ್ಪೇಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.
ಈ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಹೊಸಹಳ್ಳಿ ಗ್ರಾಮಕ್ಕೆ ಇಂದಿಗೂ ಸಹ ಮೂಲಭೂತ ಸೌಕರ್ಯಗಳನ್ನು ನೀಡುವಲ್ಲಿ ಸಂಬಂಧಪಟ್ಟ ಅಭಿವೃದ್ಧಿ ಅಧಿಕಾರಿಗಳು, ವಿಫಲರಾಗುತ್ತಿದ್ದಾರೆ, ಸ್ಥಳೀಯ ಗ್ರಾಮ ಪಂಚಾಯತಿ ಸದಸ್ಯರಾದ ತಿಪ್ಪೇಸ್ವಾಮಿ ಅವರೇ ಈ ಬಗ್ಗೆ ಖಂಡನೆ ವ್ಯಕ್ತಪಡಿಸಿದ್ದಾರೆ.
ಹೊಸಕೆರೆ ಗ್ರಾಮದಲ್ಲಿನ ಎ.ಕೆ. ಕಾಲೋನಿಯಲ್ಲಿ ಇಂದಿಗೂ ಇಲ್ಲಿನ ಸ್ಥಳೀಯರಿಗೆ ಕುಡಿಯುವ ನೀರು, ಬೀದಿ ದೀಪಗಳು ಸಹ ಸರಿಯಾದ ರೀತಿಯಲ್ಲಿ ಇಲ್ಲ. ಇಲ್ಲಿನ ಸರ್ಕಾರಿ ಶಾಲೆಯ ಮುಂದೆ ಕೊಚ್ಚೆ ತುಂಬಿದ್ದರೂ ಯಾರು ಸಹ ಗಮನಕ್ಕೆ ತೆಗೆದುಕೊಳ್ಳದೇ ಬೇಜಾವ್ದಾರಿತನ ತೋರುತ್ತಿದ್ದಾರೆ ಎಂದು ಗ್ರಾಮ ಪಂಚಾಯತಿ ಸದಸ್ಯರಾದ ತಿಪ್ಪೇಸ್ವಾಮಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
ವರದಿ: ಮುರುಳಿಧರನ್ ಆರ್., ಹಿರಿಯೂರು. ( ಚಿತ್ರದುರ್ಗ – ದಾವಣಗೆರೆ ).
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB