ಕೊರಟಗೆರೆ: ತಾಲ್ಲೂಕಿನ ಸಿ.ಎನ್.ದುರ್ಗ ಹೋಬಳಿಯ ಕುರಂಕೋಟೆ ಗ್ರಾಮದ ಪಕ್ಕದಲ್ಲಿರುವ ಜಮೀನಿನಲ್ಲಿದ್ದ ಹಲಸಿನ ಮರಕ್ಕೆ ಹಲಸಿನ ಹಣ್ಣನ್ನು ತಿನ್ನಲು ಬಂದ ಕರಡಿ ಮರಿಯೊಂದು ಮುಳ್ಳಿನ ತಂತಿಯಲ್ಲಿ ಸಿಲುಕಿಕೊಂಡ ಘಟನೆ ನಡೆದಿದೆ.
ಬೆಳಿಗ್ಗೆ ಜಮೀನಿನ ಕಡೆ ಬಂದ ರೈತರು ಮರದಲ್ಲಿ ಸಿಲುಕಿಹಾಕಿಕೊಂಡು ವೇದನೆ ಪಡುತ್ತಿದ್ದ ಕರಡಿಮರಿಯನ್ನು ಗಮನಿಸಿದ ರೈತರು ತಕ್ಷಣ ಅರಣ್ಯ ಇಲಾಖೆಗೆ ಸುದ್ದಿ ಮುಟ್ಟಿಸಿದ್ದಾರೆ .
ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ವೈದ್ಯಾಧಿಕಾರಿಗಳು ಭೇಟಿ ನೀಡಿ ಕರಡಿ ಮರಿಗೆ ಅರವಳಿಕೆ ಮದ್ದು ನೀಡಿ ಸುರಕ್ಷಿತವಾಗಿ ಮುಳ್ಳು ತಂತಿಯಿಂದ ಬಿಡಿಸಿ ಮುಳ್ಳು ತಂತಿಯಿಂದ ಸಣ್ಣಪುಟ್ಟ ಗಾಯಗಳಾಗಿತ್ತು ಚಿಕಿತ್ಸೆ ನೀಡಿ ದೂರದ ಅರಣ್ಯ ಪ್ರದೇಶಕ್ಕೆ ರವಾನಿಸಿದ್ದಾರೆ
ಕಾರ್ಯಾಚರಣೆಯಲ್ಲಿ ಕೊರಟಗೆರೆ ಯ ಅರಣ್ಯ ಇಲಾಖೆ ಅಧಿಕಾರಿಗಳಾದ ಸುರೇಶ್, ನಾಗರಾಜು, ಸಿಬ್ಬಂದಿಗಳುಹಾಗೂ ಪಶು ವೈದ್ಯಾಧಿಕಾರಿಗಳು ಹಾಜರಿದ್ದರು .
ವರದಿ: ಮಂಜುಸ್ವಾಮಿ.ಎಂ.ಎನ್. ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz