ಸರಗೂರು: ಹೆಗ್ಗಡದೇವನಕೋಟೆ (ಎಚ್.ಡಿ. ಕೋಟೆ) ಮೀಸಲು ಕ್ಷೇತ್ರದಿಂದ ಸತತ ಎರಡನೇ ಬಾರಿಗೆ ಅಭೂತಪೂರ್ವ ಜಯಗಳಿಸಿ ಇತಿಹಾಸ ನಿರ್ಮಿಸಿರುವ, ಸರಗೂರು ತಾಲೂಕಿನ ಅಭಿವೃದ್ಧಿ ಹರಿಕಾರ ಎಂದೇ ಕರೆಸಿಕೊಳ್ಳುವ ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣದ ಅಧ್ಯಕ್ಷ ಮುಳ್ಳೂರು ಲೋಕೇಶ್ ಒತ್ತಾಯಿಸಿದ್ದಾರೆ.
ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪಕ್ಷಕ್ಕೆ ನಿಷ್ಠೆಯಿಂದ ದುಡಿದಿದ್ದಾರೆ. ಮುಂದಿನ ದಿನಗಳಲ್ಲೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಗದರ್ಶನದಲ್ಲಿ ಸರ್ಕಾರದ ಎಲ್ಲಾ ಗ್ಯಾರೆಂಟಿ ಯೋಜನೆಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಹೋಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಮಂತ್ರಿಮಂಡಲದಲ್ಲಿ ನಮ್ಮ ತಾಲೂಕಿನ ಶಾಸಕರಾದ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.
ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಿದಲ್ಲಿ, ಸರಗೂರು ಹಾಗೂ ಹೆಗ್ಗಡದೇವನಕೋಟೆ ತಾಲೂಕುಗಳು ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕವಾಗಿ ಮತ್ತಷ್ಟು ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ ಎಂದು ಮುಳ್ಳೂರು ಲೋಕೇಶ್ ಅವರು ಅಭಿಪ್ರಾಯಪಟ್ಟಿದ್ದಾರೆ.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


