ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಚಾಕುವಿನಿಂದ ನಡೆದ ದಾಳಿ ಇದೀಗ ರಾಜಕೀಯ ತಿರುವು ಪಡೆದುಕೊಂಡಿದ್ದು, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣವು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನೇತೃತ್ವದ ಸರ್ಕಾರದ ವಿರುದ್ಧ ಈ ಘಟನೆಯನ್ನು ಮುಂದಿಟ್ಟುಕೊಂಡು ವಾಗ್ದಾಳಿ ನಡೆಸಿದೆ.
‘ಎಕ್ಸ್’ ಅಕೌಂಟ್ ನಲ್ಲಿ ಟ್ವೀಟ್ ಮಾಡಿರುವ ಶಿವಸೇನೆ ನಾಯಕಿ ಮತ್ತು ರಾಜ್ಯಸಭಾ ಸಂಸದೆ ಪ್ರಿಯಾಂಕಾ ಚತುರ್ವೇದಿ, ಸೆಲೆಬ್ರೆಟಿಗಳು ಸುರಕ್ಷತೆಯ ಕೊರತೆ ಎದುರಿಸುತ್ತಿದ್ದಾರೆ, ಇನ್ನು ಜನಸಾಮಾನ್ಯರ ಪರಿಸ್ಥಿತಿ ಏನು ಎಂದು ಪ್ರಶ್ನಿಸಿದ್ದಾರೆ.
ಮುಂಬೈನಲ್ಲಿ ಮತ್ತೋರ್ವ ಸೆಲೆಬ್ರಿಟಿ ಮೇಲೆ ಹಲ್ಲೆ ನಡೆದಿದೆ. ಈ ದಾಳಿ ಮುಂಬೈ ಪೊಲೀಸರು ಮತ್ತು ಗೃಹ ಸಚಿವರ ಕಾರ್ಯವೈಖರಿ ಮೇಲೆ ಪ್ರಶ್ನೆಗಳನ್ನು ಹುಟ್ಟು ಹಾಕುತ್ತದೆ ಎಂದು ಟೀಕಿಸಿದ್ದಾರೆ.
ಬಾಬಾ ಸಿದ್ದಿಕಿ ಹತ್ಯೆ, ನಟ ಸಲ್ಮಾನ್ ಖಾನ್ ಗೆ ಬರುತ್ತಿರುವ ಕೊಲೆ ಬೆದರಿಕೆಗಳು ಮತ್ತು ಈಗ ಸೈಫ್ ಅಲಿ ಖಾನ್ ಮೇಲಿನ ದಾಳಿಯಿಂದಾಗಿ, ದೇಶ ವಾಸಿಗಳಲ್ಲಿ ಮುಂಬೈ ನಗರ ಸುರಕ್ಷಿತವಲ್ಲ ಎಂಬ ಭಾವನೆ ಮೂಡುವಂತಾಗಿದೆ ಎಂದಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx