ಮೈಸೂರು: ನಾವು ಮನೆಯಲ್ಲಿ ಕೂತರು ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.
ಇಂದು ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮುಂದಿನ 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯ ಅವರನ್ನು ಮನೆಗೆ ಕಳುಹಿಸುತ್ತೇವೆ. ಆ ಚುನಾವಣೆಯಲ್ಲಿ ಸಿದ್ದರಾಮಯ್ಯ ಮನೆಗೆ ಹೋಗುವ ಕಾರ್ಯಕ್ರಮ ಇದೆ. ಆ ಕಾರಣದಿಂದ ಅವರು ಮನೆಯಲ್ಲೇ ಕೂತಿರುತ್ತಾರೆ ಎಂದು ವ್ಯಂಗ್ಯವಾಡಿದರು.
ಇನ್ನು, ಪಕ್ಷ ಸಂಘಟನೆಯ ಬಗ್ಗೆ ಕೋರ್ ಕಮಿಟಿಯಲ್ಲಿ ಚರ್ಚೆ ನಡೆಯುತ್ತಿದೆ. ಪಕ್ಷ ಮತ್ತಷ್ಟು ಬಲಗೊಳ್ಳಲಿದೆ ಹಾಗೂ ಈ ಬಾರಿ ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನವನ್ನು ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy