ರಾಯಗಢ : ಗೋವಾ- ಮುಂಬೈ ಹೆದ್ದಾರಿಯಲ್ಲಿ ವ್ಯಾನ್ ಮತ್ತು ಟ್ರಕ್ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿ ಮಗು ಸೇರಿ 9 ಜನರು ಮೃತಪಟ್ಟ ದಾರುಣ ಘಟನೆ ರಾಯಗಡ ಜಿಲ್ಲೆ ರೆಪೊಲಿ ಎಂಬಲ್ಲಿ ನಡೆದಿದೆ.
ಘಟನಾ ಸ್ಥಳವಾದ ರೆಪೊಲಿ ಗ್ರಾಮ ಮುಂಬೈಯಿಂದ ಸುಮಾರು 130 ಕಿಲೋ ಮೀಟರ್ ದೂರದಲ್ಲಿದೆ. ಮೃತಪಟ್ಟವರನ್ನು ರತ್ನಗಿರಿ ಜಿಲ್ಲೆಯ ನಿವಾಸಿಗಳೆಂದು ಗುರುತಿಸಲಾಗಿದೆ.
ಗಾಯಗೊಂಡ ನಾಲ್ಕು ವರ್ಷದ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ಅಸುನೀಗಿದ ಜನರ ಮೃತದೇಹಗಳನ್ನು ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


