ಪ್ರವಾದಿ ಮೊಹಮ್ಮದ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಬಿಜೆಪಿಯಿಂದ ಅಮಾನತುಗೊಂಡಿರುವ ನೂಪುರ್ ಶರ್ಮಾ ಸಮಸ್ಯೆಗಳ ಸುಳಿಯಲ್ಲಿ ಸಿಕ್ಕು ಒದ್ದಾಡುತ್ತಿದ್ದಾರೆ. ಇದೀಗ ಮುಂಬೈ ಪೊಲೀಸರು ನೂಪುರ್ ಶರ್ಮಾಗೆ ಸಮನ್ಸ್ ನೀಡಿದ್ದಾರೆ.
ಜೂನ್ 22 ರಂದು ಮುಂಬೈ ಪೊಲೀಸರ ಮುಂದೆ ಹಾಜರಾಗಬೇಕು ಎಂದು ತಿಳಿಸಿದ್ದಾರೆ. ಇದಕ್ಕೂ ಮುನ್ನ ಮಾತನಾಡಿದ ಮಹಾರಾಷ್ಟ್ರ ಗೃಹ ಸಚಿವ ದಿಲೀಪ್ ವಾಲ್ಸೆ ಪಾಟೀಲ್, ‘ನೂಪುರ್ ಶರ್ಮಾ ಪ್ರವಾದಿ ಮೊಹಮ್ಮದ್ ಬಗ್ಗೆ ವಾಗ್ದಾಳಿ ನಡೆಸಿದ ರೀತಿಗೆ ಸಂಬಂಧಿಸಿದಂತೆ ಮುಂಬೈನಲ್ಲಿ ಪ್ರಕರಣ ದಾಖಲಾಗಿದೆ.
ಪೊಲೀಸರು ತನಿಖೆ ಆರಂಭಿಸಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಈ ಎಂದು ತಿಳಿಸಿದ್ದರು. ಇತ್ತೀಚಿಗೆ ಮೊಹಮ್ಮದ್ ಪೈಗಂಬರ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ನೂಪುರ್ ಶರ್ಮಾ ಅವರನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) ಪಕ್ಷದಿಂದ ಅಮಾನತುಗೊಳಿಸಿದೆ.
ಟಿವಿ ಚರ್ಚೆಯೊಂದರಲ್ಲಿ ನೂಪುರ್ ಶರ್ಮಾ ಅವರು ಮೊಹಮ್ಮದ್ ಪೈಗಂಬರ್ ಗೆ ಮಾಡಿದ ಅವಮಾನಕರ ಹೇಳಿಕೆ ಗೆ ಮುಸ್ಲಿಂ ಸಮುದಾಯಗಳಿಂದ ತುಂಬಾ ವಿರೋಧ ವ್ಯಕ್ತವಾಗಿದೆ.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5