ಬೆಂಗಳೂರು: ರಾಜ್ಯದ ಹಲವು ಕಡೆ ಇಂದು ಧಾರಾಕಾರ ಮಳೆಯಾಗಿದ್ದು, ಮುಂದಿನ 24 ಗಂಟೆಯಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ತಮಿಳುನಾಡು ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿದ್ದು, ಸಮುದ್ರ ಮಟ್ಟದಿಂದ 7.7 ಕಿ.ಲೋ ಎತ್ತರದವರೆಹೆ ವ್ಯಾಪಿಸಿದೆ. ಈ ಮೇಲ್ಮೈ ಸುಳಿಗಾಳಿಯು ಉತ್ತರ ಒಳನಾಡಿನವರೆಗೂ ವ್ಯಾಪಿಸಿದೆ. ಹಾಗಾಗಿ ಮುಂದಿನ 5 ದಿನಗಳು ಬೆಂಗಳೂರಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಇನ್ನೂ 5 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ರಾಜ್ಯದ ಮಲೆನಾಡು, ಉತ್ತರ ಒಳನಾಡು, ಕರಾವಳಿ, ಬೆಂಗಳೂರು ಭಾಗದಲ್ಲಿ ಇಂದಿನಿಂದ 5 ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


