ಮುಂದಿನ 24 ಗಂಟೆಗಳಲ್ಲಿ ಬಿಪೋರ್ಜೋಯ್ ಚಂಡಮಾರುತ ತೀವ್ರಗೊಂಡು ಉತ್ತರ-ಈಶಾನ್ಯಕ್ಕೆ ಚಲಿಸಲಿದೆ ಎಂದು ಮುನ್ಸೂಚಕರು ತಿಳಿಸಿದ್ದಾರೆ. ಚಂಡಮಾರುತವು ಪ್ರಸ್ತುತ ಗೋವಾದಿಂದ 690 ಕಿ.ಮೀ ದೂರದಲ್ಲಿ 145 ಕಿ.ಮೀ ಗರಿಷ್ಠ ವೇಗದಲ್ಲಿದೆ. ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ಕೇಂದ್ರ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಗುಜರಾತ್. ಕೇರಳ, ಕರ್ನಾಟಕ ಮತ್ತು ಲಕ್ಷದ್ವೀಪ ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಹೋಗದಂತೆ ಅಧಿಕಾರಿಗಳು ಸೂಚಿಸಿದ್ದಾರೆ.
ಈಶಾನ್ಯ ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಬಾಂಗ್ಲಾದೇಶ-ಮ್ಯಾನ್ಮಾರ್ ಕರಾವಳಿಯ ಬಳಿ ಪ್ರಬಲವಾದ ವಾಯುಭಾರ ಕುಸಿತವಾಗಿ ಪರಿಣಮಿಸಿದೆ. ಮುಂದಿನ 4 ದಿನಗಳ ಕಾಲ ಕೇರಳದಲ್ಲಿ ವ್ಯಾಪಕ ಗುಡುಗು/ಮಿಂಚು/ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಕೇಂದ್ರ ತಿಳಿಸಿದೆ. ಕೇಂದ್ರ ಹವಾಮಾನ ಇಲಾಖೆಯ ಪ್ರಕಾರ ಜೂನ್ 10 ರಿಂದ 11 ರವರೆಗೆ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


