ತುಮಕೂರು: ರಾಜ್ಯದಲ್ಲಿ ಬಿಜೆಪಿಯ ದುರಾಡಳಿತಕ್ಕೆ ಜನರು ಬೇಸತ್ತಿದ್ದು ಬೆಲೆ ಏರಿಕೆ ಸೇರಿದಂತೆ ಬಿಜೆಪಿಯ ರಾಜಕಾರಣಕ್ಕೆ ಸಾಮಾನ್ಯ ಜನರು ಬೇಸತ್ತಿದ್ದು, ಕಾಂಗ್ರೆಸ್ ಪಕ್ಷವನ್ನು ಸೇರುತ್ತಿದ್ದಾರೆ. ಹಿನ್ನೆಲೆಯಲ್ಲಿ ತುಮಕೂರು ನಗರದಲ್ಲಿ ಮುಂಬರುವ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲಿದೆ ಎಂದು ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಆರ್. ರಾಮಕೃಷ್ಣ ವಿಶ್ವಾಸ ವ್ಯಕ್ತಪಡಿಸಿದರು.
ಪಕ್ಷದ ಕಚೇರಿಯಲ್ಲಿ ನಡೆದ ಜಿಲ್ಲಾ ಕಾರ್ಮಿಕ ವಿಭಾಗದ ಪದಾಧಿಕಾರಿಗಳ ನೇಮಕಾತಿ ಆದೇಶ ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಹೆಚ್ಚಾಗುತ್ತಿದ್ದು, ಗ್ಯಾಸ್ ಡೀಸೆಲ್-ಪೆಟ್ರೋಲ್ ಕಟ್ಟಡ ಸಾಮಗ್ರಿಗಳ ಬೆಲೆ ದುಸ್ತರವಾಗಿದ್ದು, ಜೀವನ ಮಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ ಬಿಜೆಪಿ ಪಕ್ಷ ದುರಾಡಳಿತ ಮತ್ತು ಭ್ರಷ್ಟಾಚಾರಕ್ಕೆ ಸಿಲುಕಿ ನರಳುತ್ತಿದ್ದಾರೆ. ಹಿನ್ನೆಲೆಯಲ್ಲಿ ತುಮಕೂರು ನಗರದಲ್ಲಿ ಅತಿ ಹೆಚ್ಚಿನ ಸಾಮಾನ್ಯ ಜನರು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗುತ್ತಿದ್ದು, ಮುಂಬರುವ ಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿ ದಾದಾಪೀರ್ ಮಾತನಾಡಿ, ರಾಜ್ಯದಲ್ಲಿ ಕೆಪಿಸಿಸಿ ಕಾರ್ಮಿಕ ವಿಭಾಗದ ಅಧ್ಯಕ್ಷರು ಮತ್ತು ಉಸ್ತುವಾರಿಗಳಾದ ಪುಟ್ಟಸ್ವಾಮಯ್ಯನವರ ಆದೇಶದಂತೆ ಜಿಲ್ಲೆಯಲ್ಲಿ ಕಾರ್ಮಿಕ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು, ಮುಂಬರುವ ದಿನಗಳಲ್ಲಿ ತಾಲೂಕು ಹೋಬಳಿ ನಗರ ಪ್ರದೇಶದ ವಾರ್ಡ್ ಗಳ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಮಿಕ ವಿಭಾಗದ ಸಮಿತಿಗಳನ್ನು ರಚಿಸಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಅವರು ತಿಳಿಸಿದರು.
ಪದಾಧಿಕಾರಿಗಳ ನೇಮಕಾತಿ ಆದೇಶ ಪತ್ರ ವಿತರಣೆ ಸಂದರ್ಭ ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ಅಬ್ದುಲ್ ಹಕೀಮ್ ಮನೋಜ್ ಬ್ಲಾಕ್ ಅಧ್ಯಕ್ಷ ಮೆಹಬೂಬ್ ಪಾಷಾ ನಯಾಸ್ ಮುಸ್ತಫ ಸೇರಿದಂತೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ: ಎ.ಎನ್. ಪೀರ್ , ತುಮಕೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5