ತುಮಕೂರು: ದಕ್ಷಿಣ ಕನ್ನಡದ ಬೆಳ್ಳಾರೆ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಬಳಿಕ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಆಕ್ರೋಶಗೊಂಡಿದ್ದಾರೆ.
ತಮ್ಮ ಪಕ್ಷದ ಕಾರ್ಯಕರ್ತರಿಗೆ ರಕ್ಷಣೆ ನೀಡದ ಬಿಜೆಪಿ ವಿಫಲವಾಗಿದೆ ಎಂದು ನಿನ್ನೆ ಅನೇಕ ಕಾರ್ಯಕರ್ತರು ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಸದ್ಯ ತುಮಕೂರು ಜಿಲ್ಲೆಯಲ್ಲೂ ಬಿಜೆಪಿ ಮುಖಂಡರ ರಾಜೀನಾಮೆ ಮುಂದುವರಿದಿದ್ದು, ಬಿಜೆಪಿ ಜಿಲ್ಲಾ ಸಾಮಾಜಿಕ ಜಾಲತಾಣ ಪ್ರಕೋಷ್ಟಕದ ಸದಸ್ಯರ ಸ್ಥಾನಕ್ಕೆ ಕಿರಣ್ ಹಾಗೂ ರಕ್ಷಿತ್ ರಾಜೀನಾಮೆ ನೀಡಿದ್ದಾರೆ.
ಇನ್ನು ಪಕ್ಷದಲ್ಲಿ ಕಾರ್ಯಕರ್ತರಿಗೆ ರಕ್ಷಣೆಯಿಲ್ಲವೆಂದು ರೈತ ಮೋರ್ಚ ಪ್ರಧಾನ ಕಾರ್ಯದರ್ಶಿ ಹಾಲೇಗೌಡ ಕೂಡ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz