ತುಮಕೂರು: ರಾಜ್ಯ ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಅವರು ಫೆಬ್ರವರಿ 27ರಂದು ಜಿಲ್ಲೆಗೆ ಭೇಟಿ ನೀಡಿ ವಿವಿಧ ಸಭೆ, ಸಮಾರಂಭಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಸಚಿವರು ಫೆ.27ರ ಬೆಳಿಗ್ಗೆ 10.30 ಗಂಟೆಗೆ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ಬೆಳಿಗ್ಗೆ 11 ಗಂಟೆಗೆ ನಗರದ ಇಂದಿರಾ ಕ್ಯಾಂಟೀನ್ ಮತ್ತು ಘನತ್ಯಾಜ್ಯ ನಿರ್ವಹಣಾ ಘಟಕವನ್ನು ಪರಿಶೀಲಿಸಲಿದ್ದಾರೆ.
ನಂತರ ಬೆಳಿಗ್ಗೆ 11.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿ ಸಂಬಂಧಿಸಿದಂತೆ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ನಗರದಿಂದ ಮಧ್ಯಾಹ್ನ 2 ಗಂಟೆಗೆ ಹೊರಟು 2.45 ಗಂಟೆಗೆ ಶಿರಾ ಪಟ್ಟಣದ ಇಂದಿರಾ ಕ್ಯಾಂಟೀನ್ಗೆ ಭೇಟಿ ನೀಡಿ ಪರಿಶೀಲನೆ ನಡೆಸುವರು. ನಂತರ 3 ಗಂಟೆಗೆ ಶಿರಾ ನಗರಸಭೆಗೆ ಭೇಟಿ ನೀಡಿ 4 ಗಂಟೆಗೆ ರಸ್ತೆ ಮಾರ್ಗವಾಗಿ ಬೆಂಗಳೂರಿಗೆ ತೆರಳಲಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4