ಬೆಂಗಳೂರು: ಆರ್.ಆರ್.ನಗರ ಕ್ಷೇತ್ರದ ಶಾಸಕ ಮುನಿರತ್ನ ಸ್ವಪಕ್ಷ ಹಾಗೂ ವಿರೋಧಪಕ್ಷದ ವಿರುದ್ಧ ವಿಶ್ವದಲ್ಲೇ ಕಂಡಿರದಂತಹ ಸಂಚನ್ನು ಮಾಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಯಾರ್ಯಾರು ಸಿಕ್ಕಿಕೊಂಡಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿ ಗೊತ್ತಿಲ್ಲ. ಎಲ್ಲವನ್ನೂ ಪರಿಶೀಲಿಸಿದ ಬಳಿಕ ಮಾತನಾಡುವುದು ಒಳ್ಳೆಯದು ಎಂದರು.
ಮುನಿರತ್ನ ಪ್ರಕರಣದಲ್ಲಿ ಎಸ್ಐಟಿ ರಚನೆ ಮಾಡಬೇಕೆಂಬುದು ನಮ ಪಕ್ಷದ ಶಾಸಕರು, ಸಚಿವರು, ಕೆಲ ಮುಖಂಡರು ಮನವಿ ಮಾಡಿರುವ ಬಗ್ಗೆ ಹೆಚ್ಚಿನ ಚರ್ಚೆಯಾಗಿಲ್ಲ. ಆದರೆ ವಿರೋಧಪಕ್ಷದ ನಾಯಕ ಆರ್.ಅಶೋಕ್ ವಿರುದ್ಧ ನಡೆದಿರುವ ಷಡ್ಯಂತ್ರದ ಬಗ್ಗೆ ಕೇಳಿ ದಿಗ್ಭ್ರಮೆಯಾಯಿತು. ದೇಶದಲ್ಲಷ್ಟೇ ಅಲ್ಲ ವಿಶ್ವದಲ್ಲೇ ಈ ರೀತಿಯ ಸಂಚನ್ನು ನಾನು ನೋಡಿಲ್ಲ ಎಂದು ಹೇಳಿದರು.
ಸಿ.ಟಿ.ರವಿಯಣ್ಣ, ಅಶೋಕಣ್ಣ, ವಿಜಯೇಂದ್ರಣ್ಣ, ಕುಮಾರಣ್ಣ ಅವರು ಸತ್ಯಾಸತ್ಯತೆಯನ್ನು ಪರಿಶೀಲಿಸಿ ಮಾತನಾಡಬೇಕು. ಮುನಿರತ್ನ ಪ್ರಕರಣದಲ್ಲಿ ಜೆಡಿಎಸ್, ಬಿಜೆಪಿ ಮುಖಂಡರು ಉತ್ತರ ಕೊಡಬೇಕು, ನಾವುಗಳಲ್ಲ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296