ಮಧುಗಿರಿ: ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಮುರಳೀಧರ ಹಾಲಪ್ಪ ಹುಟ್ಟು ಹಬ್ಬವನ್ನು ಆಚರಿಸಲಾಯಿತು.
ಕೋಡ್ಲಾಪುರ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಡಾ.ಜಿ.ಪರಮೇಶ್ವರ್ ಅಭಿಮಾನಿಗಳ ಯುವಬಳಗ ಹಾಗೂ ಮುರಳೀಧರ ಹಾಲಪ್ಪ ಅಭಿಮಾನಿಗಳ ಬಳಗದ ವತಿಯಿಂದ ಮುರಳೀಧರ ಹಾಲಪ್ಪ ಹುಟ್ಟು ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಇದೇ ವೇಳೆ ವಿದ್ಯಾರ್ಥಿಗಳಿಗೆ ಸಿಹಿ ಹಂಚಿ, ಕೇಕ್ ಕತ್ತರಿಸಲಾಯಿತು.
ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ಡಾ.ಜಿ.ಪರಮೇಶ್ವರ್ ಯುವಸೈನ್ಯದ ಜಿಲ್ಲಾಧ್ಯಕ್ಷ ಮುರಳಿ ರಾಚಯ್ಯ, ಕರ್ನಾಟಕ ಕಾರ್ಮಿಕ ರಕ್ಷಣಾ ವೇದಿಕೆ ತಾಲ್ಲೂಕು ಅಧ್ಯಕ್ಷರಾದ ಮಾರುತಿ ಕೆ.ಎನ್., ರಂಗನಾಥ್, ಪುಟ್ನಂಜ, ರಾಜು, ಚಂದನ್, ಚಂದ್ರಕಾಂತ್, ಮಾದೇಶ್, ಪ್ರವೀಣ್ ಇನ್ನು ಮುಂತಾದ ಯುವಕರು ಉಪಸ್ಥಿತರಿದ್ದರು.
ವರದಿ: ಅಬಿದ್ ಮಧುಗಿರಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy