nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕವನ: ದಸರಾ

    September 30, 2025

    ತುಮಕೂರಿಗೆ ಮೆಟ್ರೋ: ಅಂದಾಜು 20,649 ಕೋಟಿ ವೆಚ್ಚ: ಸಚಿವ ಡಾ.ಜಿ.ಪರಮೇಶ್ವರ್

    September 30, 2025

    ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಅಳವಡಿಕೆ: ಎನ್.ಎಸ್.ಜಯಕುಮಾರ್

    September 30, 2025
    Facebook Twitter Instagram
    ಟ್ರೆಂಡಿಂಗ್
    • ಕವನ: ದಸರಾ
    • ತುಮಕೂರಿಗೆ ಮೆಟ್ರೋ: ಅಂದಾಜು 20,649 ಕೋಟಿ ವೆಚ್ಚ: ಸಚಿವ ಡಾ.ಜಿ.ಪರಮೇಶ್ವರ್
    • ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಅಳವಡಿಕೆ: ಎನ್.ಎಸ್.ಜಯಕುಮಾರ್
    • ತಿಪಟೂರು | ರಾಗಿ ಬೆಳೆಗೆ ಡ್ರೋನ್ ಬಳಸಿ ನ್ಯಾನೋ ಯೂರಿಯಾ ಸಿಂಪಡಣೆ ಪ್ರಾತ್ಯಕ್ಷಿಕೆ
    • ಶಿಕ್ಷಕರ ಶ್ರಮಕ್ಕೆ ಬೆಲೆ ಕಟ್ಟಲಾಗದು: ಗುರುವಂದನಾ ಕಾರ್ಯಕ್ರಮದಲ್ಲಿ ಡಾ.ವೈ.ಡಿ.ರಾಜಣ್ಣ
    • ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜು: ಆಯುಧ ಪೂಜೆ ಕಾರ್ಯಕ್ರಮ
    • ದಸರಾ ಹಬ್ಬ, ಆಯುಧ ಪೂಜೆ ಆಚರಣೆ ನಡುವೆಯೂ ಹೂವಿನ ಬೆಲೆ ಏರಿಕೆಯಾಗಿಲ್ಲ!: ಕಾರಣ ಏನು?
    • ತುಮಕೂರು | ನಂದಿಹಳ್ಳಿ –ಮಲ್ಲಸಂದ್ರ ಬೈಪಾಸ್ ರಸ್ತೆಗೆ ರೈತರಿಂದ ವಿರೋಧ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಹಿಳಾ ಕ್ರೀಡಾಪಟುಗಳನ್ನು ಪೊಲೀಸರು ಎಳೆದೊಯ್ದಿರೋದು ಖಂಡನೀಯ: ಮುರಳೀಧರ ಹಾಲಪ್ಪ
    ತುಮಕೂರು May 30, 2023

    ಮಹಿಳಾ ಕ್ರೀಡಾಪಟುಗಳನ್ನು ಪೊಲೀಸರು ಎಳೆದೊಯ್ದಿರೋದು ಖಂಡನೀಯ: ಮುರಳೀಧರ ಹಾಲಪ್ಪ

    By adminMay 30, 2023No Comments2 Mins Read
    muralidhara halappa

    ಅಂತಾರಾಷ್ಟ್ರೀಯ ಕ್ರೀಡಾಪಟುಗಳಿಗೆ ಆಗಿರುವ ಅನ್ಯಾಯ ಹಾಗೂ ಅವಮಾನವನ್ನು ಖಂಡಿಸಿ, ಮಂಗಳವಾರ ನಗರದ ಟೌನ್ ಹಾಲ್ ಸರ್ಕಲ್ ಬಳಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮುರಳೀಧರ ಹಾಲಪ್ಪ ನೇತೃತ್ವದಲ್ಲಿ ಪಕ್ಷಾತೀತವಾಗಿ ಮತ್ತು ಕುಸ್ತಿ, ಕಬ್ಬಡಿ ಸೇರಿದಂತೆ ಇತರೆ ಕ್ರೀಡಾಪಟುಗಳೊಂದಿಗೆ ಸಾರ್ವಜನಿಕರಲ್ಲಿ ದೌರ್ಜನ್ಯಗಳ ಬಗ್ಗೆ ತಿಳಿವಳಿಕೆ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

    ಟೌನ್ ಹಾಲ್ ವೃತ್ತದಲ್ಲಿ ಆಂಜನೇಯಸ್ವಾಮಿ ಭಾವಚಿತ್ರವಿಟ್ಟು ಪೂಜೆ ಸಲ್ಲಿಸಿ ಸಾಂಕೇತಿಕವಾಗಿ ಕುಸ್ತಿ ಪಂದ್ಯಾವಳಿಯನ್ನು ನಡೆಸುವ ಮೂಲಕ ವಿನೂತನವಾಗಿ ಮಹಿಳಾ ಕ್ರೀಡಾಪಟುಗಳಿಗೆ ಬೆಂಬಲ ಸೂಚಿಸಲಾಯಿತು.


    Provided by
    Provided by
    Provided by

    ಈ ಸಂದರ್ಭದಲ್ಲಿ ಮಾತನಾಡಿದ ಮುರಳೀಧರ ಹಾಲಪ್ಪ ಅವರು, ತರಬೇತುದಾರ ಬ್ರಿಜ್ ಭೂಷಣ್ ಮಹಿಳಾ ಕ್ರೀಡಾಪಟುಗಳ ಮೇಲೆ ನಡೆಸಿರುವ ಲೈಂಗಿಕ ದೌರ್ಜನ್ಯದ ವಿರುದ್ಧ ಕ್ರಮ ಕೈಗೊಳ್ಳುವ ಬದಲು ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿರುವ ಮಹಿಳಾ ಕ್ರೀಡಾಪಟುಗಳನ್ನು ಪೊಲೀಸರು ಅಮಾನವೀಯವಾಗಿ ಎಳೆದೊಯ್ದ ರೀತಿ ಖಂಡನೀಯ ಎಂದರು.

    ಮಹಿಳೆಯರು ಕ್ರೀಡಾ ಜಗತ್ತಿಗೆ ಬರುವುದೇ ಅಪರೂಪ. ಅಂತಹುದರಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪದಕ ಗೆದ್ದು ಭಾರತದ ಹಿರಿಮೆ ಸಾರಿದ ಕುಸ್ತಿಪಟುಗಳಿಗೆ ನಮ್ಮ ನೆಲದಲ್ಲಿ ಅವಮಾನಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಮಹಿಳಾ ಕ್ರೀಡಾಪಟುಗಳ ಮತ್ತು ಅವರ ಪೋಷಕರ ಪರವಾಗಿ ನಮ್ಮ ಧ್ವನಿ ಇಡೀ ರಾಷ್ಟ್ರಕ್ಕೆ ತಲುಪಬೇಕು ಎಂಬ ನಿಟ್ಟಿನಲ್ಲಿ ಇಂದು ಸಾಂಕೇತಿಕವಾಗಿ ಕುಸ್ತಿ ಪಂದ್ಯ ಏರ್ಪಡಿಸಿ ನಮ್ಮೆಲ್ಲರ ಮಕ್ಕಳಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡುತ್ತಿದ್ದು, ಹಾಸ್ಟೆಲ್ ಗೆ ಸೇರುವಂತಹ, ಕ್ರೀಡಾಂಗಣಕ್ಕೆ ಬರುವವರು, ರಾಷ್ಟ್ರ, ರಾಜ್ಯವನ್ನು ಪ್ರತಿನಿಧಿಸುವ ನಿಮ್ಮಜೊತೆ ನಾವಿದ್ದೇವೆ. ಯಾವುದೇ ಕೆಟ್ಟ ನಡುವಳಿಕೆಗಳಿಗೆ ಆಸ್ಪದ ಕೊಡಬಾರದು, ಆಯ್ಕೆ ಸಮಿತಿ, ಕೋಚ್ ಅಥವಾ ಪ್ರಾಯೋಜಕರಿಗೆ ಇದು ಎಚ್ಚರಿಕೆಯ ಸಂದೇಶ ಎಂದರು.

    ದೆಹಲಿಯ ಜಂತರ್ ಮಂಥರ್ ನಲ್ಲಿ ಏ.23 ರಿಂದ ಆರಂಭಗೊಂಡ ಹೋರಾಟಕ್ಕೆ ಇಂದಿಗೂ ನ್ಯಾಯ ಸಿಗದಿರುವುದು ಬೇಸರದ ಸಂಗತಿ. ಕುಸ್ತಿ ಒಂದೇ ಅಲ್ಲ, ಕ್ರಿಕೆಟ್, ಕಬಡ್ಡಿ, ಅಥ್ಲೆಟಿಕ್ಸ್ ಪ್ರತಿಯೊಂದರಲ್ಲೂ ಯಾರು ಧ್ವನಿ ಹೊರಗೆ ಹೇಳುವುದಕ್ಕೆ ಸಾಧ್ಯವಿಲ್ಲದೇ ಒಳಗೆಯೇ ಹೆಣ್ಣುಮಕ್ಕಳು ನೋವನ್ನು ಅನುಭವಿಸುತ್ತಿದ್ದಾರೋ ಅವರ ಪರವಾಗಿ ನಾವಿದ್ದೇವೆ ಎಂಬ ಧೈರ್ಯವನ್ನು ತುಂಬುವ ಕೆಲಸವನ್ನು ಮಾಡುತ್ತಿದ್ದೇವೆ ಎಂದರು.

    ಮಹಿಳಾ ಕ್ರೀಡಾಪಟುಗಳಿಗೆ ಸುಭದ್ರತೆ ಹಾಗೂ ಆತ್ಮವಿಶ್ವಾಸವನ್ನು ನೀಡಿ ಅವರ ಸಾಧನೆಗೆ ಪೂರಕವಾದ ವಾತಾವರಣವನ್ನು ನೀಡುವ ಉದ್ದೇಶದಿಂದ ತುಮಕೂರಿನಿಂದ ಈ ಕಾರ್ಯಕ್ರಮವನ್ನು ಆಯೋಜಿಸಿದ್ದೇವೆ. ಬುಧವಾರದಿಂದ ಜಿಲ್ಲೆಯಾದ್ಯಂತ ಪ್ರತೀ ತಾಲ್ಲೂಕಿನಲ್ಲೂ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿದ್ದೇವೆ ಎಂದು ಮುರಳೀಧರ ಹಾಲಪ್ಪ ತಿಳಿಸಿದರು.

    ಹಿರಿಯ ಕುಸ್ತಿಪಟು ರೇವಣಸಿದ್ಧಯ್ಯ ಮಾತನಾಡಿ, ರಾಮಾಯಣ ಮಹಾಭಾರತದ ಕಾಲದಿಂದಲೂ ಹೆಸರುವಾಸಿಯಾದ ಕುಸ್ತಿ ಪಂದ್ಯಾವಳಿಯಲ್ಲಿ ಇಂದು ಮಹಿಳೆಯರು ಭಾಗವಹಿಸಿ ದೇಶದ ಕೀರ್ತಿ ಪತಾಕೆಯನ್ನು ಹಾರಿಸುತ್ತಿದ್ದು, ಇಂತಹ ಮಹಿಳಾ ಕ್ರೀಡಾಪಟುಗಳಿಗೆ ಲೈಂಗಿಕ ದೌರ್ಜನ್ಯ ನೀಡಿರುವ ಬ್ರಿಜ್ ಭೂಷಣ್ ವಿರುದ್ಧ ಕೂಡಲೇ ಕ್ರಮ ಕೈಗೊಂಡು ಬಂಧಿಸಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

    ಅಂತರಾಷ್ಟ್ರೀಯ ಕ್ರೀಡಾಪಟು ಟಿ.ಕೆ.ಆನಂದ್ ಮಾತನಾಡಿ, ಒಲಂಪಿಕ್ ಕ್ರೀಡೆಯಲ್ಲಿ ದೇಶಕ್ಕೆ ಕೀರ್ತಿ ತಂದಿರುವಂತಹ ಮಹಿಳಾ ಕ್ರೀಡಾಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಬ್ರಿಜ್ ಭೂಷಣ್ ವಿರುದ್ಧ ಕ್ರಮ ಕೈಗೊಳ್ಳುವ ಬದಲು ಹೋರಾಟ ನಡೆಸುತ್ತಿರುವ ಮಹಿಳಾ ಕುಸ್ತಿಪಟುಗಳ ವಿರುದ್ಧ ಪೊಲೀಸರನ್ನು ಬಿಟ್ಟು ಅವರನ್ನು ಎಳೆದೊಯ್ದ ರೀತಿ ಖಂಡನೀಯ ಎಂದರು.

    ರಾಷ್ಟ್ರೀಯ ಕ್ರೀಡಾಪಟು ಅನಿಲ್ ಮಾತನಾಡಿ, ಮಹಿಳಾ ಕುಸ್ತಿ ಪಟುಗಳು ಪ್ರತಿಭಟನೆ ನಡೆಸುತ್ತಿದ್ದರೂ ದೇಶದ ಪ್ರಧಾನಿಗಳು ನಾಟಕೀಯ ಮಾಡುತ್ತಿದ್ದಾರೆ. ಕಳೆದ ಒಂದೂವರೆ ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿರುವ ಮಹಿಳಾ ಕುಸ್ತಿಪಟುಗಳ ಸಮಸ್ಯೆ ಆಲಿಸಲು ಪ್ರಧಾನಿಗಳಿಗೆ ಪುರುಸೊತ್ತಿಲ್ಲ, ಕೂಡಲೇ ಮಹಿಳಾ ಕುಸ್ತಿಪಟುಗಳ ಸಮಸ್ಯೆ ಆಲಿಸಿ ಬ್ರಿಜ್ ಭೂಷಣ್  ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

    ಈ ವೇಳೆ ಸಿದ್ಧಲಿಂಗೇಗೌಡ, ಷಣ್ಮುಖಪ್ಪ, ಮೋಹನ್, ರೇವಣ ಸಿದ್ಧಯ್ಯ, ತರುಣೇಶ್, ನಟರಾಜಶೆಟ್ಟಿ, ಸಂಜೀವ್ಕುಮಾರ್, ಅನಿಲ್, ಗೀತಾ ರುದ್ರೇಶ್, ಸವಿತಾ, ಕವಿತಾ, ವಸುಂಧರ, ಸಿ.ಡಿ.ಜಯಶ್ರೀ, ಅನ್ನಪೂರ್ಣ, ಗೀತಾ, ಪ್ರೇಮ, ಲಕ್ಷ್ಮೀದೇವಮ್ಮ, ಟಿ.ಕೆ.ಆನಂದ್, ಪೈಲ್ವಾನ್ ಮಹೇಶ್, ಗಗನ್ ಗೌಡ, ಸಿದ್ಧರಾಜು, ಚಿಕ್ಕರಂಗಪ್ಪ, ತಾಹೇರಾ, ಪ್ರಕಾಶ್ ಸೇರಿದಂತೆ ಕುಸ್ತಿಪಟುಗಳು, ಹಲವಾರು ಕ್ರೀಡಾಪಟುಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ತುಮಕೂರಿಗೆ ಮೆಟ್ರೋ: ಅಂದಾಜು 20,649 ಕೋಟಿ ವೆಚ್ಚ: ಸಚಿವ ಡಾ.ಜಿ.ಪರಮೇಶ್ವರ್

    September 30, 2025

    ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜು: ಆಯುಧ ಪೂಜೆ ಕಾರ್ಯಕ್ರಮ

    September 30, 2025

    ದಸರಾ ಹಬ್ಬ, ಆಯುಧ ಪೂಜೆ ಆಚರಣೆ ನಡುವೆಯೂ ಹೂವಿನ ಬೆಲೆ ಏರಿಕೆಯಾಗಿಲ್ಲ!: ಕಾರಣ ಏನು?

    September 30, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಕವನ: ದಸರಾ

    September 30, 2025

    ವಿ.ಎಂ.ಎಸ್.ಗೋಪಿ, ಬೆಂಗಳೂರು. ನವ ರಾತ್ರಿಗಳು ಮೈಸೂರ ದಸರಾಗಳು ನವರಾತ್ರಿ ಉತ್ಸವಗಳು ಎಷ್ಟೊಂದು ಸುಂದರವು ಹಬ್ಬದ ಸಡಗರವು ನವ ಅವತಾರಗಳು ನವ…

    ತುಮಕೂರಿಗೆ ಮೆಟ್ರೋ: ಅಂದಾಜು 20,649 ಕೋಟಿ ವೆಚ್ಚ: ಸಚಿವ ಡಾ.ಜಿ.ಪರಮೇಶ್ವರ್

    September 30, 2025

    ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಅಳವಡಿಕೆ: ಎನ್.ಎಸ್.ಜಯಕುಮಾರ್

    September 30, 2025

    ತಿಪಟೂರು | ರಾಗಿ ಬೆಳೆಗೆ ಡ್ರೋನ್ ಬಳಸಿ ನ್ಯಾನೋ ಯೂರಿಯಾ ಸಿಂಪಡಣೆ ಪ್ರಾತ್ಯಕ್ಷಿಕೆ

    September 30, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.