ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪವಿತ್ರಾ ಗೌಡ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು 57ನೇ ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿದೆ.
ತನ್ನಿಂದ ರೇಣುಕಾ ಸ್ವಾಮಿ ನಿಧನ ಹೊಂದಿಲ್ಲ, ತಾನು ಮಹಿಳೆ ಹಾಗೂ ಸಿಂಗಲ್ ಮದರ್ ಆಗಿದ್ದು, ಮಗಳ ಆರೈಕೆ ಮಾಡಬೇಕು, ಇನ್ನಿತರೆ ಕಾರಣಗಳನ್ನು ಪವಿತ್ರಾ ಗೌಡ ನೀಡಿದ್ದರು. ಆದರೆ ಯಾವುದೇ ಕಾರಣವನ್ನು ನ್ಯಾಯಾಲಯ ಪರಿಗಣಿಸಿಲ್ಲ. ಪವಿತ್ರಾ ಅವರ ಜಾಮೀನು ಅರ್ಜಿಯನ್ನು ಕೆಳಹಂತದ ನ್ಯಾಯಾಲಯ ರದ್ದು ಮಾಡಿದೆ.
ಪವಿತ್ರಾ ಗೌಡ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ 57ನೇ ಸೆಷನ್ಸ್ ನ್ಯಾಯಾಲಯದಲ್ಲಿ ನಡೆದಿತ್ತು, ನ್ಯಾಯಾಧೀಶ ಐಪಿ ನಾಯಕ್ ಅವರು ವಿಚಾರಣೆ ನಡೆಸಿ ಅರ್ಜಿಯನ್ನು ವಜಾ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC