ಚಿಕ್ಕಬಳ್ಳಾಪುರ: ಕುಡಿದ ಅಮಲಿನಲ್ಲಿ ಮಹಿಳೆಯನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ನಡೆದಿದೆ. ಸೀಗಲಹಳ್ಳಿ ಗ್ರಾಮದ ಆಲುವೇಲಮ್ಮ (45) ಮೃತ ದುರ್ದೈವಿಯಾಗಿದ್ದಾರೆ.
ಆಲುವೇಲಮ್ಮ, ರಾಮಾಂಜಿನಮ್ಮ, ಸಂಜೀವಪ್ಪ ಎಂಬವರು ಜೊತೆಯಾಗಿ ಕೂಲಿ ಕೆಲಸಕ್ಕೆ ಹೋಗಿದ್ದಾರೆ. ಮೂವರು ಕುಡಿದು ಜಮೀನಿನಲ್ಲೇ ಜಗಳವಾಡಿಕೊಂಡಿದ್ದಾರೆ. ಜಗಳ ವಿಕೋಪಕ್ಕೆ ತಿರುಗಿದ್ದು, ಆಲುವೇಲಮ್ಮಳ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ. ವಿಚಾರ ತಿಳಿದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಆಲುವೇಲಮ್ಮಳ ಜೊತೆ ಇದ್ದ ರಾಮಾಂಜಿನಮ್ಮ, ಸಂಜೀವಪ್ಪ ಎಂವರನ್ನು ಪೊಲೀಸರು ಬಂಧಿಸಿದ್ದಾರೆ. ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296