ತುಮಕೂರು: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯನ್ನು ಭೀಕರವಾಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಐತಿಹಾಸಿಕ ತೀರ್ಪು ಪ್ರಕಟಿಸಿದೆ. ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ ಎರಡನೇ ಆರೋಪಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಲಾಗಿದೆ.
ತಮ್ಮ ನಡುವಿನ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದರೆಂಬ ಕಾರಣಕ್ಕೆ ಆರೋಪಿಗಳು ವೃದ್ಧೆಯನ್ನು ಕ್ರೂರವಾಗಿ ಕೊಲೆ ಮಾಡಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯಕ್ಕೆ ಆರೋಪಿಗಳ ಮೇಲಿನ ಕೃತ್ಯ ಸಾಬೀತಾದ ಹಿನ್ನೆಲೆಯಲ್ಲಿ ಈ ಕಠಿಣ ಶಿಕ್ಷೆ ಪ್ರಕಟಿಸಲಾಗಿದೆ.
ನ್ಯಾಯಾಧೀಶರಾದ ಶಿಲ್ಪಾ ಕೆ.ಎಸ್. ಅವರು ಪ್ರಕರಣದ ಸಂಪೂರ್ಣ ಮೌಲ್ಯಮಾಪನ ನಡೆಸಿ ಮೊದಲನೇ ಆರೋಪಿ (ಬಾಲಚಂದ್ರ – 47 ವರ್ಷ): ಕೊಲೆ ಆರೋಪ ಸಂಪೂರ್ಣ ಸಾಬೀತಾದ ಹಿನ್ನೆಲೆಯಲ್ಲಿ ಈತನಿಗೆ ಜೀವಾವಧಿ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಲಾಗಿದೆ.
ಎರಡನೇ ಆರೋಪಿ (ಲತಾ – 40 ವರ್ಷ): ಈಕೆಗೆ ಮೂರು ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 10 ಸಾವಿರ ರೂಪಾಯಿ ದಂಡ ವಿಧಿಸಿ ನ್ಯಾಯಾಧೀಶರು ಆದೇಶಿಸಿದ್ದಾರೆ.
ಸರ್ಕಾರದ ಪರವಾಗಿ ಆರನೇ ಹೆಚ್ಚುವರಿ ಸರ್ಕಾರಿ ಅಭಿಯೋಜಕರಾದ ಕೆ.ಸಿ. ದೀಪಕ್ ಅವರು ಸಮರ್ಥವಾಗಿ ವಾದ ಮಂಡಿಸಿ, ಆರೋಪಿಗಳಿಗೆ ಶಿಕ್ಷೆಯಾಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


