ಮಂಗಳೂರು: ಮಂಗಳೂರಿನಲ್ಲಿ ಮತ್ತೆ ನೆತ್ತರು ಹರಿದಿದ್ದು, ಅಬ್ದುಲ್ ರಹೀಮಾನ್ ಎಂಬ ಯುವಕನ ಬರ್ಬರ ಹತ್ಯೆ ಮಾಡಲಾಗಿದೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಘಟನೆಗೆ ಸಂಬಂಧಿಸಿದಂತೆ 15 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.
ಅಬ್ದುಲ್ ರಹೀಂ ಮತ್ತು ಕಲಂದರ್ ಶಾಫಿ ಅವರು ಹೊಳೆ ಬದಿಯಿಂದ ಪಿಕ್ ಅಪ್ ವಾಹನದಲ್ಲಿ ಮರಳು ಲೋಡ್ ಮಾಡಿ ಕುರಿಯಾಳ ಗ್ರಾಮದ ಈರಾ ಕೋಡಿಯ ರಾಜೀವಿ ಎಂಬವರ ಮನೆ ಬಳಿ ಇಳಿಸುತ್ತಿದ್ದರು. ಈ ವೇಳೆ ಪರಿಚಯಸ್ಥರಾದ ದೀಪಕ್, ಸುಮಿತ್ ಮತ್ತು 15 ಮಂದಿ ಏಕಾಏಕಿ ದಾಳಿ ನಡೆಸಿದ್ದಾರೆ. ಜೊತೆಗಿದ್ದ ಕಲಂದರ್ ಶಾಫಿ ಎಂಬ ಯುವಕನಿಗೂ ಗಂಭೀರವಾಗಿ ಗಾಯಗಳಾಗಿವೆ.
ಗಾಯಾಳು ಕಲಂದರ್ ಶಫಿ ಮಾಹಿತಿ ಅನ್ವಯ ನಿಸಾರ್ ಎಂಬವರ ದೂರಿನಡಿ ರಹೀಂ ಪರಿಚಯಸ್ಥರೇ ಆಗಿರುವ ದೀಪಕ್, ಸುಮಿತ್ ಸೇರಿ 15 ಜನರ ವಿರುದ್ದ ಬಿಎನ್‌ಎಸ್ 103, 109, 118(1), 118(2), 190, 191(1), 191(2), 191(3) ಅಡಿ ಎಫ್ ಐಆರ್ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW