ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾ ಮಠದ ಸ್ವಾಮೀಜಿಗಳ ಪುರಷತ್ವ ಪರೀಕ್ಷೆಯ ವೈದ್ಯಕೀಯ ವರದಿ ಬಿಡುಗಡೆಯಾಗಿದ್ದು, ಪುರಷತ್ವ ಸಾಬೀತಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಮಠದ ವಸತಿನಿಲಯದ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ನೀಡಿದ ಪ್ರಕರಣದಲ್ಲಿ ಶಿವಮೂರ್ತಿ ಶರಣರನ್ನು ಪೊಲೀಸರು ಬಂಧಿಸಿದ್ದು, ಶುಕ್ರವಾರ ಅವರನ್ನು2 ನೇ ಅಪರ ಜಿಲ್ಲಾ ಕೋರ್ಟ್ ನ್ಯಾಯಾಂಗ ಬಂಧನದಿಂದ ಸೆಪ್ಟೆಂಬರ್ 5ರವರೆಗೆ ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.
ಪೊಲೀಸ್ ಕಸ್ಟಡಿಗೆ ಒಪ್ಪಿಸಿದ ಬೆನ್ನಲ್ಲೇ ಪೊಲೀಸರು ಶುಕ್ರವಾರ ರಾತ್ರಿ ಜಿಲ್ಲಾಸ್ಪತ್ರೆಯಲ್ಲಿ ಮುರುಘಾ ಶರಣರನ್ನು ವೈದ್ಯಕೀಯ ಟೆಸ್ಟ್‌ಗೆ ಒಳಪಡಿಸಿದ್ದು, ಪುರುಷತ್ವ ಪರೀಕ್ಷೆಯಲ್ಲಿ ವೈದ್ಯರು ತಿಳಿಸಿದ ವರದಿಗಳಲ್ಲಿ ಶ್ರೀಗಳ ಗಂಡಸತ್ವ ಸಾಬೀತಾಗಿದೆ ಎಂಬ ಮಾಹಿತಿ ಬಹಿರಂಗವಾಗಿದೆ. ಈಗಾಗಲೇ ಎಫ್ ಎಸ್‌ಎಲ್ ಪರೀಕ್ಷೆಗಾಗಿ ಕೂದಲು, ರಕ್ತ, ಉಗುರಿನ ಮಾದರಿಗಳನ್ನು ಪ್ರಯೋಗಾಲಯ ಪಡೆದುಕೊಂಡಿದೆ ಎಂಬ ಮಾಹಿತಿ ಇದೆ ತಿಳಿದು ಬಂದಿದೆ.
ರಾತ್ರಿ ಪರೀಕ್ಷೆಗೆ ಒಳಪಡಿಸಿದ್ದು, ಶನಿವಾರ ಬೆಳಿಗ್ಗೆ ವರದಿಯನ್ನು ನೀಡಲಾಗಿದೆ. ಉಳಿದ ಮಾದರಿಗಳನ್ನು ಮಡಿವಾಳದ ಎಫ್‌ಎಸ್‌ಎಸ್‌ಲೆ ರವಾನಿಸಲಾಗಿದೆ. ಈ ಹಿಂದಿನ ಅತ್ಯಾಚಾರ ಪ್ರಕರಣಗಳಲ್ಲಿ ಆರೋಪಿ ತಾನೂ ಪುರುಷನಲ್ಲ ಎಂದು ಅಫಿಡವಿಟ್ ಸಲ್ಲಿಸಿದರೆ ಮಾತ್ರ ಪರುಷತ್ವ ಪರೀಕ್ಷೆಗೆ ಒಳಪಡಿಸಲಾಗುತ್ತಿತ್ತು. ಆದರೆ ಇತ್ತೀಚೆಗೆ ಅತ್ಯಾಚಾರ ಪ್ರಕರಣಗಳಲ್ಲಿ ಕಡ್ಡಾಯ ಪರೀಕ್ಷೆ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಪೊಲೀಸ್ ಕಸ್ಟಡಿ ಮುಗಿದ ಬಳಿಕ ಜಾಮೀನು ಅರ್ಜಿ ವಿಚಾರಣೆ ಕೋರ್ಟ್ ಮುರುಘಾ ಶರಣರನ್ನು ನ್ಯಾಯಾಂಗ ಬಂಧನದಿಂದ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಆದರೆ ಜೈಲು ಪಾಲಾಗುವುದನ್ನು ತಪ್ಪಿಸಿಕೊಳ್ಳಬೇಕು ಎಂದು ಯತ್ನಿಸುತ್ತಿರುವ ಮುರುಘಾ ಶರಣರು ಮತ್ತೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಆದರೆ ಪೊಲೀಸ್ ಕಸ್ಟಡಿ ಮುಗಿಯುವ ವರೆಗೂ ಜಾಮೀನು ಅರ್ಜಿ ವಿಚಾರಣೆ ನಡೆಸುವುದಿಲ್ಲ ಎಂದು ನ್ಯಾಯಾಲಯ ತಿಳಿಸಿದೆ.
ಸೆಪ್ಟೆಂಬರ್ ರಂದು ಪೊಲೀಸ್ ಕಸ್ಟಡಿ ಅಂತ್ಯವಾಗಲಿದ್ದು, ಅದರ ನಂತರ ಅರ್ಜಿ ವಿಚಾರಣೆ ನಡೆಯಲಿದೆ. ಆದರೆ ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ಮತ್ತಷ್ಟು ದಿನ ಕಸ್ಟಡಿಗೆ ನೀಡಲು ಕೋರ್ಟ್‌ಗೆ ಮನವಿ ಮಾಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz