ಚಿತ್ರದುರ್ಗ : ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಮುರಘಾಮಠದ ಶ್ರೀಗಳನ್ನು ಬಂಧಿಸಲಾಗಿದೆ. ಸದ್ಯ ಅವರನನ್ನು 14 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಲಾಗಿದ್ದು , ಸದ್ಯ ಮರುಘಾಮಠದ ಶ್ರೀಗಳ ಅನಾರೋಗ್ಯದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ.
ಶ್ರೀಗಳಿಗೆ ಎದೆನೋವು ಕಾಣಿಸಕೊಂಡ ಹಿನ್ನೆಲೆಯಲ್ಲಿ ಮುರುಘಾಮಠದ ಶ್ರೀಗಳನ್ನು ಜೈಲಿನಿಂದ ಆಸ್ಪತ್ರೆಗೆ ರವಾನಿಸಲಾಗಿದೆ.
ಮುರುಘಾಮಠದ ಶ್ರೀಗಳ ಬಂಧನದ ಕುರಿತಂತೆ ಪ್ರತಿಕ್ರಿಯೆ ಮಠದ ಪರ ವಕೀಲ ಉಮೇಶ್, ಮುರುಘಾ ಮಠದ ಪೀಠಾಧ್ಯಕ್ಷ ಶಿವಮೂರ್ತಿ ಮುರುಘಾ ಶರಣರನ್ನು ಪೊಲೀಸರು ಬಂಧಿಸಿಲ್ಲ. ಕಾನೂನಿಗೆ ಗೌರವ ನೀಡಲೆಂದು ಸ್ವಾಮೀಜಿಯೇ ಪೊಲೀಸರಿಗೆ ಶರಣಾಗಿದ್ದಾರೆ.
ಶ್ರೀಗಳಿಗೆ ಜಾಮೀನು ಕೋರಿ ಇಂದು ಕೋರ್ಟ್ಗೆ ಮತ್ತೆ ಅರ್ಜಿ ಸಲ್ಲಿಸುತ್ತೇವೆ. ನಾವು ನಿನ್ನೆ ನ್ಯಾಯಾಲಯಕ್ಕೆ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ರದ್ದಾಗಿದೆ. ಇಂದು ಮತ್ತೊಮ್ಮೆ ಜಾಮೀನಿಗೆ ಅರ್ಜಿ ಸಲ್ಲಿಸುತ್ತೇವೆ. ಮುರುಘಾ ಶ್ರೀಗಳು ಗೆದ್ದು ಬರುವ ವಿಶ್ವಾಸ ಇದೆ ಎಂದು ಅವರು ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy