ಚಿತ್ರದುರ್ಗದ ಮುರುಘಾ ಶ್ರೀ ಮತ್ತೆ ಜೈಲುಪಾಲಾಗಿದ್ದಾರೆ. ನಾಲ್ಕು ತಿಂಗಳ ಅವಧಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಆದೇಶ ಪ್ರಕಟಿಸಿದೆ ಎಂದು ವರದಿ ತಿಳಿಸಿದೆ. ಪೋಕ್ಸೋ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಚಿತ್ರದುರ್ಗ ಮುರುಘಾ ಶ್ರೀಗೆ ಹೈಕೋರ್ಟ್ ಜಾಮೀನು ನೀಡಿತ್ತು.
ಇದನ್ನು ಪ್ರಶ್ನಿಸಿ ಅರ್ಜಿದಾರರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಅಲ್ಲಿ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನು ರದ್ದುಗೊಳಿಸಿ ಪುನಃ ಜೈಲಿಗೆ ಕಳುಹಿಸುವಂತೆ ಆದೇಶ ಹೊರಡಿಸಿದೆ ಎಂದು ವರದಿ ತಿಳಿಸಿದೆ. ನಾಲ್ಕು ತಿಂಗಳಲ್ಲಿ ಪ್ರಕರಣ ಸಂಬಂಧ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಈ ಅವಧಿಯಲ್ಲಿ ತನಿಖೆ ಪೂರ್ಣಗೊಳ್ಳದಿದ್ದರೆ ಇನ್ನೆರಡು ತಿಂಗಳು ಹೆಚ್ಚುವರಿಗೆ ನ್ಯಾಯಾಂಗ ಬಂಧನ ನೀಡುವ ಸಾಧ್ಯತೆಗಳು ಕೂಡ ಇದೆ ಎನ್ನಲಾಗಿದೆ. ಇತ್ತ ವಿಶೇಷ ನ್ಯಾಯಾಲಯದಲ್ಲಿ ಸಂತ್ರಸ್ತ ಮಕ್ಕಳ ವಿಚಾರಣೆಗೆ ಅವಕಾಶ ನೀಡಲಾಗಿದೆ ಎಂದು ವರದಿ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296