ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಮುಸಲ್ಮಾನರಿಗೆ ಮೀಸಲಾತಿ ನೀಡುವ ಮಸೂದೆಯನ್ನು ನಿನ್ನೆ ಸದನದಲ್ಲಿ ಕದ್ದು ಮುಚ್ಚಿ ಮಂಡಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ವಿಧಾನಸೌಧದ ಮುಂಭಾಗದಲ್ಲಿ ಮಾತನಾಡಿದ ಅವರು, ವಿಪಕ್ಷದವರ ಕಣ್ತಪ್ಪಿಸಿ ಸದನದಲ್ಲಿ ಮಸೂದೆಯನ್ನು ಮಂಡಿಸಿದ್ದಾರೆ. ಬಿಜೆಪಿಯ ನಿಲುವು ಸ್ಪಷ್ಟವಾಗಿದೆ. ಬಿಜೆಪಿ, ಸಿದ್ದರಾಮಯ್ಯರ ನೇತೃತ್ವದ ಸರಕಾರದ ತುಘಲಕ್ ದರ್ಬಾರನ್ನು ಸ್ಪಷ್ಟವಾಗಿ ವಿರೋಧಿಸುತ್ತದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ಸಿನವರು ಅಲ್ಪಸಂಖ್ಯಾತರ ಓಲೈಕೆ ರಾಜಕೀಯಕ್ಕೆ ಹೊರಟಿದ್ದಾರೆ. ಸಿದ್ದರಾಮಯ್ಯ, ಸರಕಾರಕ್ಕೆ ನಿಜವಾಗಿ ಅಲ್ಪಸಂಖ್ಯಾತರ ಬಗ್ಗೆ ಕಳಕಳಿ ಇದೆಯೇ ಎಂದು ಕೇಳಿದರು.
ಅಲ್ಪಸಂಖ್ಯಾತರಿಗೆ ಉತ್ತಮ ಶಿಕ್ಷಣ ನೀಡಿ ಅವರನ್ನು ಮುಂದಕ್ಕೆ ತರುವ ಇಚ್ಛಾಶಕ್ತಿ ಕಾಂಗ್ರೆಸ್ಸಿನವರಿಗೆ ಇರಲಿಲ್ಲ. ಬಿಜೆಪಿ ಅಲ್ಪಸಂಖ್ಯಾತರ ವಿರೋಧಿ ಎಂದು ಸಿದ್ದರಾಮಯ್ಯನವರು ಬಿಂಬಿಸಲು ಹೊರಟಿದ್ದಾರೆ. ಬಿಜೆಪಿ ಮುಸಲ್ಮಾನರ ವಿರೋಧಿಗಳಲ್ಲ. ಇಡೀ ದೇಶದಲ್ಲಿ ಅಲ್ಪಸಂಖ್ಯಾತ ಮಹಿಳೆಯರಿಗೆ ನ್ಯಾಯ ನೀಡಲು ತ್ರಿವಳಿ ತಲಾಖ್ ಅನ್ನು ಕಿತ್ತು ಹಾಕಿದ್ದು, ಬಿಜೆಪಿಯ ನರೇಂದ್ರ ಮೋದಿಜೀ ಅವರ ಸರಕಾರ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4