ಬೆಂಗಳೂರು: ರಾಜಸ್ಥಾನದಲ್ಲಿ ನಡೆದ ಕನ್ಹಯ್ಯ ಲಾಲ್ ಹತ್ಯೆ ಪ್ರಕರಣವನ್ನು ಕೇಂದ್ರ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ, ಇಲ್ಲದಿದ್ದರೆ ಇದು ದೊಡ್ಡ ಅನಾಹುತಕ್ಕೆ ಕಾರಣವಾಗುತ್ತದೆ. ಮುಸ್ಲಿಂ ಸಂಘಟನೆ, ಓವೈಸಿ ಸಂಘಟನೆಯವರು ಘಟನೆ ಬಗ್ಗೆ ಏಕೆ ತುಟಿ ಬಿಚ್ಚುತ್ತಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಪ್ರಶ್ನಿಸಿದ್ದಾರೆ.
ಹಾಸನದಲ್ಲಿ ಸುದ್ದಿಗಾರರೊಂದಿಗೆ ಈ ಬಗ್ಗೆ ಮಾತನಾಡಿದ ಅವರು, ಈ ಘಟನೆ ವಿರುದ್ಧ ಮುಸ್ಲಿಂ ಸಂಘಟನೆಗಳು ಹೊರಬಂದು ಮಾತನಾಡಬೇಕು. ಮುಸ್ಲಿಂ ನಾಯಕರು ಯಾಕೆ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದರು.
ಬಟ್ಟೆ ಹೊಲಿಯಲು ಕೊಡುತ್ತೀನಿ ಎಂದು ಚಾಕು ಹಾಕಿದ್ದಾರೆ. ಇವರಿಗೆ ದಮ್ ಇಲ್ಲ, ಇದನ್ನೆಲ್ಲ ಹೇಡಿಗಳು ಮಾಡುವ ಕೆಲಸ ಎಂದು ಆರ್.ಅಶೋಕ್ ಆಕ್ರೋಶ ಹೊರ ಹಾಕಿದರು.
ಭಯೋತ್ಪಾದನೆಯ ಮುಸ್ಲಿಂ ಸಂಘಟನೆ ಅವರು ಹೀಗೆ ಮಾಡುತ್ತಾರೆ. ಈ ಹಿಂದೆ ಸಾಕಷ್ಟು ಸಂಘಟನೆಗಳನ್ನ ಬ್ಯಾನ್ ಮಾಡಿದ್ದೇವೆ, ಬ್ಯಾನ್ ಮಾಡಿದರೆ ಇನ್ನೊಂದು ಹೆಸರಲ್ಲಿ ಬರ್ತಾ ಇದ್ದಾರೆ. ರಾಜಸ್ಥಾನ ಸರ್ಕಾರ ಈ ವಿಚಾರದಲ್ಲಿ ತಪ್ಪು ಮಾಡಿದ್ದರೆ ಸರ್ಕಾರ ಉಳಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


