ಮೊಬೈಲ್ ಕದ್ದಿದ್ದಾನೆಂದು ಆರೋಪಿಸಿದ ದುಷ್ಕರ್ಮಿಗಳು ಮುಸ್ಲಿಮ್ ಯುವಕನನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಿ, ತಲೆ ಬೋಳಿಸಿ ಜೈ ಶ್ರೀ ರಾಮ್ ಘೋಷಣೆ ಮಾಡುವಂತೆ ಒತ್ತಾಯಿಸಿದ್ದು, ಈ ಸಂಬಂಧ ದೂರು ದಾಖಲಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಜೂನ್ 13 ರಂದು ಈ ಘಟನೆ ನಡೆದಿದೆ. ಬುಲಂದ್ ಶಹರ್ ಕಾಕೋಟ್ ಮೂಲದ ಸಾಹಿಲ್ ಥಳಿತಕ್ಕೊಳಗಾದ ವ್ಯಕ್ತಿ. ಸಾಹಿಲ್ ದೂರಿನ ಪ್ರಕಾರ ಗ್ರಾಮದ ಬಸ್ ನಿಲ್ದಾಣದಲ್ಲಿ ನಿಂತಿದ್ದಾಗ ಮೂವರು ಯುವಕರು ಬಂದು ಬಲವಂತವಾಗಿ ಬೈಕ್ ನಲ್ಲಿ ಕೂರಿಸಿಕೊಂಡು ಏಕಾಂತ ಸ್ಥಳಕ್ಕೆ ಕರೆದೊಯ್ದು ಥಳಿಸಿದ್ದಾರೆ. ಬಳಿಕ ಮೊಬೈಲ್ ಕಳ್ಳತನವಾಗಿರುವ ಬಗ್ಗೆ ಪ್ರಶ್ನೆ ಎತ್ತಿದ್ದಾರೆ. ಆರೋಪಿಗಳು ತನ್ನನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಿ, ತಲೆ ಬೋಳಿಸಿ ಜೈ ಶ್ರೀ ರಾಮ್ ಎಂದು ಜಪಿಸುವಂತೆ ಒತ್ತಾಯಿಸಿದರು ಎಂದು ಸಾಹಿಲ್ ಆರೋಪಿಸಿದ್ದಾರೆ.
ಘಟನಾ ಸ್ಥಳದಿಂದ ತಪ್ಪಿಸಿಕೊಂಡ ನಂತರ ಸಾಹಿಲ್ ಪೊಲೀಸರನ್ನು ಸಂಪರ್ಕಿಸಿದ್ದಾನೆ. ಆದರೆ ಅವರು ಕ್ರಮ ತೆಗೆದುಕೊಳ್ಳಲು ನಿರಾಕರಿಸಿದರು ಮತ್ತು ಬದಲಿಗೆ ಕಳ್ಳತನದ ಆರೋಪ ಹೊರಿಸಿ ಬಂಧಿಸಿದರು ಬಳಿಕ ದೂರು ಹಿಂಪಡೆಯುವಂತೆ ಒತ್ತಡ ಹೇರಿದ್ದರು ಎಂದು ಸಾಹಿಲ್ ಮತ್ತು ಆತನ ಕುಟುಂಬಸ್ಥರು ಆರೋಪಿಸಿದ್ದಾರೆ.
ಈ ಘಟನೆಯ ನಂತರ ಸಾಹಿಲ್ ಹಾಗೂ ಕುಟುಂಬಸ್ಥರು ಜೂನ್ 17 ರಂದು ಅವರು ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಯನ್ನು ಭೇಟಿಯಾಗಿ ದಾಳಿಯ ವಿಡಿಯೋ ಸಹಿತ ದೂರು ನೀಡಿದ್ದಾರೆ. ದೂರಿನ ಮೇರೆಗೆ ಮೂವರು ಆರೋಪಿಗಳ ಪೈಕಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


