ರಾಜ್ಯದಲ್ಲಿ ಆರಂಭವಾಗಿರುವ ಆಜಾನ್ ವಿರುದ್ಧದ ಸುಪ್ರಭಾತ ಅಭಿಯಾನಕ್ಕೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದು, ಮೊದಲು ಪ್ರಮೋದ್ ಮುತಾಲಿಕ್ ಅಂತವರನ್ನು ಒದ್ದು ಒಳಗೆ ಹಾಕಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಾಗಲಕೋಟೆ ಜಿಲ್ಲೆ ಬಾದಾಮಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ಸಮಾಜದಲ್ಲಿ ಬೆಂಕಿ ಹಚ್ಚುವ ಕೆಲಸವನ್ನು ಪ್ರಮೋದ್ ಮುತಾಲಿಕ್ ಮಾಡುತ್ತಿದ್ದಾರೆ. ಇಂತವರನ್ನು ಮೊದಲು ಒದ್ದು ಒಳಗೆ ಹಾಕಬೇಕು. ಇಲ್ಲವಾದಲ್ಲಿ ಸರ್ವಜನಾಂಗದ ಶಾಂತಿಯ ತೋಟವಾಗಿರುವ ರಾಜ್ಯದಲ್ಲಿ ಶಾಂತಿ ಉಳಿಯಲು ಸಾಧ್ಯವಿಲ್ಲ ಎಂದರು.
ಮುತಾಲಿಕ್ ಅವರದ್ದು ಶ್ರೀರಾಮಸೇನೆಯೋ ? ರಾವಣ ಸೇನೆಯೋ ? ಎಂದು ಪ್ರಶ್ನಿಸಿರುವ ಹೆಚ್.ಡಿ.ಕೆ, ಅನಗತ್ಯವಾಗಿ ಧಾರ್ಮಿಕ ಸಂಘರ್ಷಗಳನ್ನು ಹುಟ್ಟುಹಾಕಿ, ಶಾಂತಿ ಕದಡುವ ವಾತಾವರಣ ಸೃಷ್ಟಿಸಲಾಗುತ್ತಿದೆ. ಇಂತಹ ಘಟನೆ ನಡೆಯುತ್ತಿದ್ದರು ಸರ್ಕಾರ ಕ್ರಮ ಕೈಗೊಳ್ಳದೇ ಸುಮ್ಮನಿರುವುದು ಯಾಕೆ ? ಸರ್ಕಾರ ಮೌನವಾಗಿ ಒಪ್ಪಿಗೆ ನೀಡುವುದನ್ನು ನಿಲ್ಲಿಸಬೇಕು. ವಿಷಬೀಜ ಬೆಳೆಯಲು ಬಿಡಬಾರದು ಎಂದು ಒತ್ತಾಯಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5


