ತುಮಕೂರು: ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ನೀಡಿರುವ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ತುಮಕೂರು ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.
ಮೈಕ್ ಬಳಕೆ ವಿಚಾರದಲ್ಲಿ, ಬಿಜೆಪಿಗೆ ಸಾಧ್ಯವಾಗದಿದ್ದರೆ, ಅಧಿಕಾರದಿಂದ ಕೆಳಗಿಳಿಯಲಿ, ನನಗೆ 24 ಗಂಟೆಗಳ ಸಮಯ ನೀಡಲಿ, ನ್ಯಾಯ ಪಾಲಿಸದವರಿಗೆ ಗುಂಡು ಹೊಡೆದು ಆದೇಶ ಜಾರಿಗೊಳಿಸುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಮುತಾಲಿಕ್ ಅವರನ್ನು ತಕ್ಷಣವೇ ಬಂಧಿಸಿ ಕ್ರಮಕೈಗೊಳ್ಳಬೇಕು ಎಂದು ವೆಲ್ಫೆರ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾಧ್ಯಕ್ಷ ತಾಜುದ್ದೀನ್ ಷರೀಫ್ ಮನವಿ ಮಾಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB