6 ರಿಂದ 2 ವರ್ಷದ ಮೂವರು ಸಹೋದರಿಯರು ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.
ಅವರ ತಾಯಿ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅಮೃತಾ (6), ಜ್ಯೋತಿ (4) ಮತ್ತು ಪ್ರೀತಿ (2) ಮೃತದೇಹಗಳು ಪತ್ತೆಯಾಗಿವೆ.
ಮಂಗಳವಾರ ಸಂಜೆ ಈ ಘಟನೆ ನಡೆದಿದೆ. ಬಾವಿಯಲ್ಲಿ ಶವಗಳನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಾವಿಯಲ್ಲಿ ತಾಯಿಯೂ ಇದ್ದ ರು ಎಂದು ಸ್ಥಳೀಯರು ಹೇಳಿದ್ದು, ಶವ ಪತ್ತೆಯಾಗಿಲ್ಲ.
ಮಕ್ಕಳ ತಂದೆ ಜೀವನ್ ಬಾಮ್ನಿಯಾ (32) ಅವರು ಸಂಬಂಧಿಕರ ಮನೆಗೆ ಹೋಗಿ ಹಿಂತಿರುಗಿ ನೋಡಿದಾಗ ಅವರ ಪುತ್ರಿಯರು ಕಾಣೆಯಾಗಿದ್ದಾರೆ. ಬಳಿಕ ಸ್ಥಳೀಯರನ್ನು ಒಟ್ಟುಗೂಡಿಸಿ ಹುಡುಕಾಟ ಆರಂಭಿಸಿದ್ದಾರೆ. ಶೋಧದ ವೇಳೆ ಅವರ ಮೃತದೇಹಗಳು ಬಾವಿಯಲ್ಲಿ ಪತ್ತೆಯಾಗಿವೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA