ಸ್ನಾನ ಮಾಡುತ್ತಿದ್ದ ವೇಳೆ ಮೂವರು ಎಂಬಿಬಿಎಸ್ ವಿದ್ಯಾರ್ಥಿಗಳು ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಕಛ್ಲಾ ಗಂಗಾ ಘಾಟ್ ನಲ್ಲಿ ನಡೆದಿದೆ.
ಸಾವಿಗೀಡಾದ ವಿದ್ಯಾರ್ಥಿಗಳು ಜೈ ಮೌರ್ಯ, ಪವನ್ ಪ್ರಕಾಶ್, ನವೀನ್ ಸೆಂಗರ್, ಪ್ರಮೋದ್ ಯಾದವ್, ಅಂಕುಶ್ ಗೆಹ್ಲೋಟ್ ಎಂದು ವರದಿಯಾಗಿದೆ.
ಸರ್ಕಾರಿ ವೈದ್ಯಕೀಯ ಕಾಲೇಜಿನ ಮೂವರು ವಿದ್ಯಾರ್ಥಿಗಳು ಗಂಗಾ ನದಿಯಲ್ಲಿ ಸ್ನಾನ ಮಾಡುವಾಗ ಆಳವಾದ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಐದು ವಿದ್ಯಾರ್ಥಿಗಳು ಸ್ನಾನಕ್ಕೆ ತೆರಳಿದ್ದು, ಇಬ್ಬರನ್ನು ಸ್ಥಳೀಯರು ರಕ್ಷಿಸಿದ್ದಾರೆ.
ಕಾಲೇಜು ಪ್ರಾಂಶುಪಾಲ ಡಾ.ಧರ್ಮೇಂದ್ರ ಗುಪ್ತಾ ಮಾತನಾಡಿ, ವಿದ್ಯಾರ್ಥಿಗಳು ಕಾಲೇಜು ಆಡಳಿತಕ್ಕೆ ತಿಳಿಸದೆ ಸ್ನಾನ ಮಾಡಲು ಹೋಗಿದ್ದರು ಎಂದು ಹೇಳಿದರು.
ಕಾಣೆಯಾದ ಮೂವರು ವಿದ್ಯಾರ್ಥಿಗಳನ್ನು ಪತ್ತೆಹಚ್ಚಲು ಪ್ರಯತ್ನಗಳು ನಡೆಯುತ್ತಿವೆ. ಘಟನೆಯ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಬದೌನ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಮನೋಜ್ ಕುಮಾರ್ ತಿಳಿಸಿದ್ದಾರೆ ಎಂದು ವರದಿಯಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


