nammatumakuru

    Subscribe to Updates

    Get the latest creative news from FooBar about art, design and business.

    What's Hot

    ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ

    April 15, 2026

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    April 15, 2026

    ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್

    April 15, 2026
    Facebook Twitter Instagram
    ಟ್ರೆಂಡಿಂಗ್
    • ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ
    • ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್
    • ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್
    • ಕೃಷಿ ಪ್ರಾಯೋಗಿಕ ಪರೀಕ್ಷೆ: ರೈತರ ಮಕ್ಕಳಿಗೆ ತುಮಕೂರಿನಲ್ಲಿ ಏಪ್ರಿಲ್ 19ರಂದು ಉಚಿತ ತರಬೇತಿ ಕಾರ್ಯಾಗಾರ
    • ತುಮಕೂರು: ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಅಮಾನಿಕೆರೆಯಲ್ಲಿ ಕಣ್ಮನ ಸೆಳೆದ ಭವ್ಯ ‘ಬೋಟ್ ಪರೇಡ್’
    • ಪರಿಶಿಷ್ಟರಿಗೆ ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ: ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ
    • ಬಳ್ಳಾರಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಗ್ರಂಥಾಲಯ ನಿರ್ಮಿಸಲು ನಿರ್ಧಾರ: ಶಾಸಕ ನಾರಾ ಭರತ್ ರೆಡ್ಡಿ ಹೇಳಿಕೆ
    • ಶೀಘ್ರದಲ್ಲೇ ರಾಜ್ಯ ಸಚಿವ ಸಂಪುಟ ಪುನಾರಚನೆ? ಸುಳಿವು ನೀಡಿದ ಗೃಹ ಸಚಿವ ಜಿ.ಪರಮೇಶ್ವರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮುಜರಾಯಿ ದೇವಾಲಯದ ಜಮೀನು ಅಕ್ರಮವಾಗಿ ಮಾರಾಟ | ಕೊರಟಗೆರೆ ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
    ಕೊರಟಗೆರೆ June 2, 2025

    ಮುಜರಾಯಿ ದೇವಾಲಯದ ಜಮೀನು ಅಕ್ರಮವಾಗಿ ಮಾರಾಟ | ಕೊರಟಗೆರೆ ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

    By adminJune 2, 2025No Comments2 Mins Read

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ

    ಕೊರಟಗೆರೆ: ಸರ್ಕಾರ 1960ರ ಇಸವಿಯಲ್ಲಿ ಶ್ರೀ ಚೆಲುವ ಚೆನ್ನಿಗರಾಯ ದೇವಾಲಯಕ್ಕೆ ಸರ್ವೇ ನಂ. 130ರಲ್ಲಿ 4 ಎಕೆರೆ 6 ಗುಂಟೆ ಜಮೀನು ಮಂಜೂರು ಮಾಡಿದೆ. ಈ ದೇವಾಲಯ ಮುಜರಾಯಿ ಇಲಾಖೆ ಒಳಪಡಲಿದ್ದು. ಇಲಾಖೆಗೆ ಗೊತ್ತಿಲ್ಲದೆ ಅರ್ಚಕರ ಕುಟುಂಬ ನೆಲಮಂಗಲದ ಮಹಿಳೆಗೆ ಕ್ರಯ ಮಾಡಿದ್ದಾರೆ ಎಂಬ ಆರೋಪ ಗ್ರಾಮಸ್ಥರಿಂದ ಕೇಳಿ ಬಂದಿದೆ.


    Provided by
    Provided by

    ಕೊರಟಗೆರೆ ತಾಲ್ಲೂಕಿನ ಹೊಳವಹಳ್ಳಿ ಹೋಬಳಿ ತೊಗರಿಘಟ್ಟ ಗ್ರಾಮದ ಶ್ರೀ ಚೆನ್ನಿಗರಾಯ ಸ್ವಾಮಿ ದೇವಾಲಯ ಮುಜರಾಯಿ ಇಲಾಖೆ ಸೇರಿದೆ. ಸರ್ಕಾರದ ಜಮೀನನ್ನು ಕ್ರಯ ಮಾಡುವ ಮುನ್ನ ಇಲಾಖೆ ಗಮನಕ್ಕೆ ತರದೇ ನೆಲಮಂಗಲ ಭಾಗ್ಯಮ್ಮ ಮತ್ತು ದೀಪ.ಜೆ ಎಂಬುವವರಿಗೆ ಮಾರಾಟ ಮಾಡಿದ್ದು, ಒತ್ತಡಕ್ಕೆ ಮಣಿದ ಕುಣಿಗಲ್ ಉಪ ನೋಂದಾಣಾಧಿಕಾರಿಗಳು ಜಮೀನಿನ ದಾಖಲೆಗಳನ್ನು ಪರಿಶೀಲಿಸದೆ ಕ್ರಯ ಮಾಡಿದ್ದರೆಂದು ತಾಲ್ಲೂಕು ಕಚೇರಿಗೆ ಗ್ರಾಮಸ್ಥರು ಮುತ್ತಿಗೆ ಹಾಕಿ ಪ್ರತಿಭಟನೆಯಲ್ಲಿ ಆಕ್ರೋಶ ಹೊರ ಹಾಕಿದರು.

    ಸರ್ಕಾರದಿಂದ ದೇವಾಲಯಕ್ಕೆ ಜಮೀನು ಮಂಜುರಾದ ವೇಳೆ ಲ್ಯಾಂಡ್ ಟ್ಯೂಬುನಲ್ ಅಡಿಯಲ್ಲಿ ಸದರಿ ದೇವಾಲಯದ ಅರ್ಚಕ ಚೆನ್ನಕೇಶವಚಾರ್ ಮತ್ತು ಪತ್ನಿ ಪುಟ್ಟಲಕ್ಷಮ್ಮನವರು ಖಾತೆ,ಪಹಣಿ  ಮಾಡಿಸಿಕೊಂಡಿದ್ದರು, ಇವರ ಮರಣದ ನಂತರ ಸೊಸೆ ಸುಶೀಲಮ್ಮ ಕೋಂ ಲೇಟ್ ಶ್ರೀರಂಗಮೂರ್ತಿ ರವರ ಹೆಸರಿಗೆ ಎಂ ಆರ್‌ ಎಚ್ 54/2019 — 20 ರಲ್ಲಿ ಖಾತೆ ಮತ್ತು ಪಹಣಿಯಾಗಿದ್ದು, ಗ್ರಾಮಸ್ಥರು ಇದನ್ನು ವಿರೋಧಿಸಿ ಜಮೀನಿನ ಮೇಲೆ ಭೂ–ನ್ಯಾಯಮಂಡಳಿಯಲ್ಲಿ ಕೇಸು ದಾಖಲಿಸಿದ್ದು, ಜಮೀನು ವಿಚಾರಣೆಯ ಸಂಭಂದ ಪಟ್ಟಂತೆ ಪಹಣಿಯಲ್ಲಿ ಉಲ್ಲೇಖವಾಗಿದೆ.

    ಕೊರಟಗೆರೆ ಜೆಎಂಎಫ್‌ ಸಿ ನ್ಯಾಯಾಲಯದಲ್ಲಿ ಮತ್ತು ಉಚ್ಚ ನ್ಯಾಯಾಲಯ ದೇವಾಲಯದ ಹೆಸರಿಗೆ ಖಾತೆ ಬದಲಾವಣೆ ಮಾಡುವಂತೆ ಆದೇಶ ಮಾಡಿದೆ. ನ್ಯಾಯಾಲಯ ಆದೇಶವನ್ನೇ ಉಲ್ಲಂಘಿಸಿ ಸುಶೀಲಮ್ಮ ರವರ ಮಗ ನರಸಿಂಹಮೂರ್ತಿ ಮತ್ತು ಸೊಸೆ ಅಶ್ವಿನಿ ಬಿ.ಎ ಕುಣಿಗಲ್ ಉಪ ನೊಂದಣಾಧಿಕಾರಿಗಳ ಕಚೇರಿಯಲ್ಲಿ 12 ಮೇ 2025 ರಂದು ನೆಲಮಂಗಲದ ಭಾಗ್ಯಮ್ಮ ಮತ್ತು ದೀಪ ಜೆ ಎಂಬುವವರಿಗೆ ಕ್ರಯ ಮಾಡಿರುವುದು ಕಂಡು ಬಂದಿದೆ.

    ಕೂಡಲೇ ಎಂ.ಆರ್ ವಜಾಗೊಳಿಸುವಂತೆ ಕೋರಿ ತಹಶೀಲ್ದಾರ್ ಕೆ.ಮಂಜುನಾಥ್‌ ಗೆ ಊರಿನ ಗ್ರಾಮಸ್ಥರು ಮನವಿ ಸಲ್ಲಿಸಿದ್ದಾರೆ.

    ಈ ವೇಳೆ ಗ್ರಾಮಸ್ಥರಾದ ಎಚ್.ನಾರಾಯಣಪ್ಪ, ಟಿ.ಎಚ್ ಕೃಷ್ಣಮೂರ್ತಿ, ಸಂಜೀವರೆಡ್ಡಿ, ಗ್ರಾ.ಪಂ ಸದಸ್ಯ ಸಿದ್ದಲಿಂಗಪ್ಪ, ನರಸಿಂಹಮೂರ್ತಿ, ಲಕ್ಷ್ಮಿಕಾಂತ್, ಅರ್ಚಕ ನಟರಾಜ್ ಆರಾಧ್ಯ, ಗೋವಿಂದಪ್ಪ, ಮರೀಸ್ವಾಮಿ, ನರೇಂದ್ರಬಾಬು, ಲಿಂಗರಾಜು, ನಾರಾಯಣ ಸ್ವಾಮಿ, ಅನಂತರಾಮು, ಪಾಪೇಗೌಡ ಸೇರಿದಂತೆ ಇತರರು ಇದ್ದರು.

    ಅಗತ್ಯ ಕ್ರಮಕ್ಕೆ ತಹಶೀಲ್ದಾರ್ ಭರವಸೆ :

    ತಾಲ್ಲೂಕಿನ ತೊಗರಿಗಟ್ಟ ಗ್ರಾಮದ ಸ.ನಂ 130 ರ ಶ್ರೀ ಚೆಲುವ ಚೆನ್ನಿಗರಾಯ ಸ್ವಾಮಿ ದೇವಾಲಯ ಜಮೀನು ಗ್ರಾಮಸ್ಥರ ಗಮನಕ್ಕೆ ಬಾರದೇ ನೆಲಮಂಗಲದ ಮಹಿಳೆ ಹಾಗೂ ಇತರೆ ವ್ಯಕ್ತಿ ಹೆಸರಿಗೆ ಕ್ರಯವಾಗಿದೆ ಎಂದು ಗ್ರಾಮಸ್ಥರು ಆರೋಪ ಮಾಡಿ ಮನವಿ ಮಾಡಿದ್ದಾರೆ, ಪರಿಶೀಲನೆ ನಡೆಸಿ ಶೀಘ್ರದಲ್ಲಿ ಅಗತ್ಯಕ್ರಮ ಕೈಗೊಳ್ಳುವುದಾಗಿ ತಹಶೀಲ್ದಾರ್ ಮಂಜುನಾಥ್ ಮನವಿ ಸ್ವೀಕರಿಸಿ ಭರವಸೆ ನೀಡಿದರು.

    ಸರ್ಕಾರ ನೂರಾರು ವರ್ಷಗಳ ಹಿಂದೆ ಚೆಲುವ ಚೆನ್ನಿಗರಾಯ ದೇವಾಲಯಕ್ಕೆಂದು ತೊಗರಿಘಟ್ಟ ಗ್ರಾಮದಲ್ಲಿ ಜಮೀನು ಮಂಜೂರು ಮಾಡಿತ್ತು. ಉಚ್ಚ ನ್ಯಾಯಾಲಯದಲ್ಲಿ ಮತ್ತು ಕೊರಟಗೆರೆ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಅರ್ಚಕರ ಹೆಸರಿನಲ್ಲಿದ್ದ ಖಾತೆ ಮತ್ತು ಪಹಣಿ ವಜಾಗೊಳಿಸಿ ದೇವಾಲಯದ ಹೆಸರಿಗೆ ವರ್ಗಾವಣೆ ಮಾಡಲಾಗಿತ್ತು. 2024 ರವೆರೆಗೂ ಕಲಂ 11ರಲ್ಲಿ ಕೇಸ್ ನಂಬರ್ ನೋಂದಣಿಯಾಗಿತ್ತು. 2025ರ ನಂತರ ಕುಣಿಗಲ್ ಉಪ ನೋಂದಾಣಾಧಿಕಾರಿಗಳ ಪರಿಶೀಲಿಸಿದೆ ನೆಲಮಂಗಲದ ಭಾಗ್ಯಮ್ಮ ಎಂಬುವವರಿಗೆ ಕ್ರಯ ಮಾಡಿದ್ದಾರೆ. ಎಂ.ಆರ್ ವಜಾಗೊಳಿಸುವಂತೆ ತಹಶೀಲ್ದಾರ್‌ಗೆ ಮನವಿ ಮಾಡಲಾಗಿದೆ.

    — ಕೋದಂಡರಾಮಯ್ಯ, ತೊಗರಿಗಟ್ಟ ಗ್ರಾಮಸ್ಥರು.


    ಶ್ರೀ ಚೆಲುವ ಚೆನ್ನಿಗರಾಯ ದೇವಾಲಯಕ್ಕೆ ನೂರಾರು ವರ್ಷಗಳ ಇತಿಹಾಸವಿದೆ. ಅರ್ಚಕರು ತಮ್ಮ ಪೂಜೆಯ ಜೊತೆಗೆ ಜಮೀನಿನಲ್ಲಿ ಉಳುಮೆ ಮಾಡಲು ಗ್ರಾಮಸ್ಥರು ಅವಕಾಶ ಕಲ್ಪಿಸಿದ್ದರು. ಈ ಅವಕಾಶದಿಂದ ಜಮೀನನ್ನು ತಮ್ಮಂತೆ ಮಾಡಿಕೊಳ್ಳಲು ಅರ್ಚಕರ ಕುಟುಂಬ ಮುಂದಾದ ವೇಳೆ ಗ್ರಾಮಸ್ಥರು ನ್ಯಾಯಾಲಯ ಮೊರೆ ಹೋಗಿದ್ದು, ನ್ಯಾಯಾಲಯ ದೇವಾಲಯಕ್ಕೆ ಸೀಮಿತ ಜಮೀನೆಂದು ಆದೇಶ ಮಾಡಿದೆ. ಆದರೆ ಅರ್ಚಕರ ಮರಣದ ನಂತರ ಕುಟುಂಬದ ಮಕ್ಕಳು ನೆಲಮಂಗಲದ ಭಾಗ್ಯಮ್ಮ ಎಂಬುವವರಿಗೆ ಕ್ರಯ ಮಾಡಿರುವುದು ಕಂಡು ಬಂದಿದೆ.

    — ನಾರಾಯಣಪ್ಪ. ಗ್ರಾಮದ ಮುಖಂಡರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ

    April 13, 2026

    ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಕಾರು, ಬೈಕ್ ಗಳು ಸುಟ್ಟು ಭಸ್ಮ

    April 12, 2026

    ಎನ್‌ ಎಸ್‌ ಎಸ್ ವಿದ್ಯಾರ್ಥಿಗಳು ನಾಯಕತ್ವ ಮನೋಭಾವ ಬೆಳೆಸಿಕೊಳ್ಳಿ: ಈರಪ್ಪ ನಾಯಕ

    April 12, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ

    April 15, 2026

    ಬೆಂಗಳೂರು: “ವೈಚಾರಿಕತೆ, ವೈಜ್ಞಾನಿಕತೆ ಹಾಗೂ ಮಾನವೀಯತೆ ಇಲ್ಲದಿದ್ದರೆ ಅದು ನಿಜವಾದ ಶಿಕ್ಷಣವಲ್ಲ, ಅದು ಕೇವಲ ಬದುಕುವ ದಾರಿಯಷ್ಟೇ,” ಎಂದು ಮುಖ್ಯಮಂತ್ರಿ…

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    April 15, 2026

    ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್

    April 15, 2026

    ಕೃಷಿ ಪ್ರಾಯೋಗಿಕ ಪರೀಕ್ಷೆ: ರೈತರ ಮಕ್ಕಳಿಗೆ ತುಮಕೂರಿನಲ್ಲಿ ಏಪ್ರಿಲ್ 19ರಂದು ಉಚಿತ ತರಬೇತಿ ಕಾರ್ಯಾಗಾರ

    April 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.